ಕ್ರಿಕೆಟ್‌ ಬೆಟ್ಟಿಂಗ್‌: 2.50 ಲಕ್ಷ ನಗದು ವಶ , ಓರ್ವ ಬಂಧನ
ಬೆಂಗಳೂರು:ವ್ಯಕ್ತಿಯೊಬ್ಬನನ್ನು ಕ್ರಿಕೆಟ್ ಬೆಟ್ಟಿಂಗ್‍ ತೊಡಗಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಬಂಧಿಸಿ 2.50 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕು ದುನ್ನಸಂದ್ರ ಗ್ರಾಮದ ಶಶಿಕುಮಾರ್ ಎಂದು ತಿಳಿದುಬಂದಿದೆ. ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯ ಕಾಮಾಕ್ಯ ಥಿಯೇಟರ್ ಎದುರುಗಡೆ ಬಿಲ್ಡಿಂಗ್‍ ನಲ್ಲಿರುವ ಪ್ರಶಾಂತ್ ನಾನ್‍ವೆಜ್ ಹೋಟೆಲ್‍ನಲ್ಲಿ ಇಂಡಿಯಾ ಮತ್ತು ಆಸ್ಟ್ರೇಲಿಯ ತಂಡಗಳ ನಡುವೆ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಈ ತಂಡ ಗಳ ಸೋಲು- ಗೆಲುವಿನ ಬಗ್ಗೆ ಮೊಬೈಲ್ ಮೂಲಕ ನಗದಾಗಿ ಹಣ ವನ್ನು ಪಣವಾಗಿ ಕಟ್ಟಿಸಿಕೊಂಡು ಜೂಜಾಡುತ್ತಿದ್ದ.
ಖಚಿತ ಮಾಹಿತಿ ಆಧರಿಸಿ ಸಿಸಿಬಿ ವಿಶೇಷ ವಿಚಾರಣಾ ದಳ- ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ 2.50.000 ರೂ. ಹಾಗೂ 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕೆ.ಪಿ. ರವಿಕುಮಾರ್ ಮಾರ್ಗದರ್ಶನದಲ್ಲಿ ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಎನ್. ಹನುಮಂತರಾಯ ಅವರ ನೇತೃತ್ವದಲ್ಲಿ ನಡೆಯಿತು.