ಡುಪ್ಲೆಸಿಸ್-ವಾಟ್ಸನ್ ಅಮೋಘ ಬ್ಯಾಟಿಂಗ್: ಚೆನ್ನೈಗೆ 10 ವಿಕೆಟ್ ಭರ್ಜರಿ ಗೆಲುವು
ದುಬೈ:ಆರಂಭಿಕ ಆಟಗಾರರಾದ ಡುಪ್ಲೆಸಿಸ್ ಹಾಗೂ ಶೇನ್ ವಾಟ್ಸನ್ ಜೋಡಿಯ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಗೆಲುವಿಗೆ 179 ರನ್ ಗುರಿ ಪಡೆದ ಚೆನ್ನೈ ಕೇವಲ 17.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಗೆಲುವಿನ ರನ್ ಬಾರಿಸಿತು. ಡುಪ್ಲೆಸಿಸ್ 53 ಎಸೆತಗಳಲ್ಲಿ 87 ರನ್ ಬಾರಿಸಿದರೆ, ಶೇನ್ ವಾಟ್ಸನ್ 53 ಎಸೆತಗಳಲ್ಲಿ 83 ರನ್ ಸಿಡಿಸಿದರು. ಒಟ್ಟು 22 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಹರಿದು ಬಂದವು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಆರಂಭಿಕ ಆಟಗಾರ, ನಾಯಕ ಕೆ.ಎಲ್ ರಾಹುಲ್ ಮತ್ತೊಮ್ಮೆ ತಂಡಕ್ಕೆ ಆಸರೆಯಾದರು. ಅವರು 52 ಎಸೆತಗಳಲ್ಲಿ 63 ರನ್ ಗಳಿಸಿ ಔಟಾದರು. ನಿಕೋಲಸದ ಪೂರನ್ 17 ಎಸೆತಗಳಲ್ಲಿ 33 ರನ್ ಸಿಡಿಸಿದರು. ಮಂದೀಪ್ ಸಿಂಗ್ 27, ಮಯಾಂಕ್ ಅಗರವಾಲ್ 26 ರನ್ ಬಾರಿಸಿದರು. ಚೆನ್ನೈ ಪರ ಶಾರ್ದೂಲ್ ಠಾಕೂರ್ 2 ವಿಕೆಟ್ ಪಡೆದರು.
ಶೇನ್ ವ್ಯಾಟ್ಸನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.