 : ಸೆಹವಾಗ್ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​
ಚೆನ್ನೈ:ಈಗಾಗಲೇ ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಭಾರತದ 2ನೇ ಆಟಗಾರ ಎನಿಸಿಕೊಂಡಿರುವ ರೋಹಿತ್​ ಶರ್ಮ( ), ಬಾಂಗ್ಲಾದೇಶ(  ) ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಅಗ್ರಸ್ಥಾನದಲ್ಲಿರುವ ಮಾಜಿ ಸ್ಫೋಟಕ ಆಟಗಾರ ವೀರೇಂದ್ರ ಸೆಹವಾಗ್‌( ) ದಾಖಲೆ ಮುರಿಯುವ ನಿರೀಕ್ಷೆಯಲ್ಲಿದ್ದಾರೆ.
ರೋಹಿತ್​ ಶರ್ಮ ಎರಡು ಪಂದ್ಯಗಳ ಈ ಟೆಸ್ಟ್‌ ಸರಣಿಯಲ್ಲಿ 7 ಸಿಕ್ಸರ್‌ ಬಾರಿಸಿದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಮೊದಲ ಆಟಗಾರ ಎನ್ನುವ ಹಿರಿಮೆಗೆ ಪಾತ್ರರಾಗಲಿದ್ದಾರೆ. ಸದ್ಯ ದಾಖಲೆ ಮಾಜಿ ಡ್ಯಾಶಿಂಗ್​ ಆಟಗಾರ ವಿರೇಂದ್ರ ಸೆಹವಾಗ್​ ಹೆಸರಿನಲ್ಲಿದೆ. ಸೆಹವಾಗ್ 104 ಟೆಸ್ಟ್​ ಪಂದ್ಯ ಆಡಿ 90 ಸಿಕ್ಸರ್​ ಬಾರಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ರೋಹಿತ್‌ 59* ಪಂದ್ಯಗಳಿಂದ 90* ಸಿಕ್ಸರ್‌ ಬಾರಿಸಿದ್ದಾರೆ. ಮಹೇಂದ್ರ ಸಿಂಗ್​ ಧೋನಿ 78 ಸಿಕ್ಸರ್​ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಸಚಿನ್‌ ದಾಖಲೆ ಮೇಲೆ ಜಡೇಜಾ ಕಣ್ಣು
ಸ್ಟಾರ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾ ಕೂಡ ಈ ಸರಣಿಯಲ್ಲಿ ಸಿಕ್ಸರ್‌ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. ಜಡೇಜಾ 6 ಸಿಕ್ಸರ್‌ ಬಾರಿಸಿದರೆ ದಿಗ್ಗಜ ಆಟಗಾರ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ಜಡೇಜಾ 64* ಸಿಕ್ಸರ್‌ ಬಾರಿಸಿ 5ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ : ಗಣೇಶೋತ್ಸವ ಮೆರವಣಿಗೆಯಲ್ಲಿ ರಾರಾಜಿಸಿದ ರೋಹಿತ್‌ ಶರ್ಮ ಬ್ಯಾನರ್‌
ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಟಾಪ್​-5 ಬ್ಯಾಟರ್‌ಗಳು
ರೋಹಿತ್ ಈ ವರ್ಷದ ಆರಂಭದಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದರು. ಎರಡು ಶತಕಗಳನ್ನು ಬಾರಿಸಿ 400 ರನ್‌ಗಳನ್ನು ಕಲೆಹಾಕಿದ್ದರು. ಹೀಗಾಗಿ ಬಾಂಗ್ಲಾ ಸರಣಿಯಲ್ಲೂ ಇವರ ಬ್ಯಾಟಿಂಗ್‌ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ.
ವಿಶ್ವ ದಾಖಲೆ ಸನಿಹ ಜೈಸ್ವಾಲ್‌
ಜೈಸ್ವಾಲ್‌ ಈ ಟೆಸ್ಟ್‌ ಸರಣಿಯಲ್ಲಿ ಕೇವಲ 8 ಸಿಕ್ಸರ್‌ ಬಾರಿಸಿದರೆ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ.
ಪ್ರಸ್ತುತ ಟೆಸ್ಟ್ ಕ್ರಿಕೆಟ್‌ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ನ್ಯೂಜಿಲ್ಯಾಂಡ್‌ ತಂಡದ ಮಾಜಿ ಸ್ಫೋಟಕ ಬ್ಯಾಟರ್‌, ಹಾಲಿ ಇಂಗ್ಲೆಂಡ್‌ ಟೆಸ್ಟ್‌ ತಂಡದ ಕೋಚ್‌ ಆಗಿರುವ ಬ್ರೆಂಡನ್ ಮೆಕಲಮ್ ಹೆಸರಿನಲ್ಲಿದೆ. ಮೆಕಲಮ್ 2014 ರಲ್ಲಿ 9 ಟೆಸ್ಟ್‌ ಪಂದ್ಯಗಳಿಂದ 33 ಸಿಕ್ಸರ್‌ ಬಾರಿಸಿದ್ದರು. ಸದ್ಯ ಜೈಸ್ವಾಲ್‌ ಕ್ಯಾಲೆಂಡರ್ ವರ್ಷದಲ್ಲಿ 6 ಟೆಸ್ಟ್‌ ಪಂದ್ಯಗಳನ್ನಾಡಿ 26 ಸಿಕ್ಸರ್‌ ಬಾರಿಸಿದ್ದಾರೆ. 8 ಸಿಕ್ಸರ್‌ ಬಾರಿಸಿದರೆ 10 ವರ್ಷಗಳ ಹಿಂದೆ ಮೆಕಲಮ್‌ ನಿರ್ಮಿಸಿದ್ದ ದಾಖಲೆ ಪತನಗೊಳ್ಳಲಿದೆ. ಭಾರತ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯಧಿಕ ಸಿಕ್ಸರ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜೈಸ್ವಾಲ್‌ ಸದ್ಯ 13ನೇ ಸ್ಥಾನಿಯಾಗಿದ್ದಾರೆ. 29 ಸಿಕ್ಸರ್‌ ಬಾರಿಸಿದ್ದಾರೆ.