 2025: ಏನಿದು ಐಪಿಎಲ್‌ ಮೆಗಾ ಹರಾಜಿನಲ್ಲಿ ಜಾರಿಗೆ ಬರಲಿರುವ 3+1 ನಿಯಮ?
ಮುಂಬಯಿ: 18ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಡಿಸೆಂಬರ್‌ ಅಂತ್ಯದಲ್ಲಿ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಎಲ್ಲ ಫ್ರಾಂಚೈಸಿಗಳು ಬಿಸಿಸಿಐ ಜತೆ ಒಂದು ಸುತ್ತಿನ ಸಭೆ ಕೂಡ ನಡೆಸಿ ಚರ್ಚೆಯನ್ನು ನಡೆಸಿದೆ. ಕೆಲ ದಿನಗಳ ಹಿಂದೆ ಐಪಿಎಲ್( 2025)​ ಮೆಗಾ( ) ಹರಾಜಿನಲ್ಲಿ ಬಿಸಿಸಿಐ ಪ್ರತಿ ತಂಡಕ್ಕೆ ಗರಿಷ್ಠ 4ರ ಬದಲಾಗಿ 6 ಆಟಗಾರರನ್ನು ರಿಟೇನ್​ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿತ್ತು. ಆದರೆ, ಇದೀಗ ವರದಿಯಾದ ಪ್ರಕಾರ ಬಿಸಿಸಿಐ ಒಂದು ತಂಡಕ್ಕೆ ಕೇವಲ 3+1 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ನೀಡಲಿದೆ ಎನ್ನಲಾಗಿದೆ. ಈ ನಿಯಮದ ಪ್ರಕಾರ ಮೂವರು ಆಟಗಾರರನ್ನು ಉಳಿಸಿಕೊಂಡು, ಮತ್ತೋರ್ವ ಆಟಗಾರನನ್ನು ಆರ್‌ಟಿಎಂ () ಕಾರ್ಡ್ ಬಳಸಿ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶವಿದೆ.
ಆರ್‌ಟಿಎಂ ಬಳಕೆ ಹೇಗೆ?
ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು, ಇದೀಗ ಮತ್ತೆ ಈ ನಿಯವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಒಲವು ತೋರಿದೆ ಎನ್ನಲಾಗಿದೆ.
ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಮತ್ತೊಂದು ಸುತ್ತಿನ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ.