ಕನ್ನಡಿಗ ದೊಡ್ಡ ಗಣೇಶ್ ಕೀನ್ಯಾ ಕ್ರಿಕೆಟ್ ತಂಡದ ಮುಖ್ಯಕೋಚ್​
ಬೆಂಗಳೂರು:ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್ ಅವರು ಕೀನ್ಯಾ ತಂಡದ ಮುಖ್ಯ ಕೋಚ್​ ಆಗಿ ನೇಮಕಗೊಂಡಿ ದ್ದಾರೆ.
90ರ ದಶಕದಲ್ಲಿ ಭಾರತ ಮತ್ತು ಕರ್ನಾಟಕ ರಣಜಿ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ ಹೆಗ್ಗಳಿಕೆ ಇವರದ್ದು.
50 ವರ್ಷದ ದೊಡ್ಡ ಗಣೇಶ್ 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಿಂದ 365 ವಿಕೆಟ್​ ಪಡೆದಿದ್ದಾರೆ. ಭಾರತ ತಂಡದ ಪರ 6 ವಿಕೆಟ್​ ಕಿತ್ತಿದ್ದಾರೆ. ಲಿಸ್ಟ್​ ‘ಎ’ ಕ್ರಿಕೆಟ್​ನಲ್ಲಿ 89 ಪಂದ್ಯಗಳನ್ನಾಡಿ 128 ವಿಕೆಟ್​ ಪಡೆದಿ ದ್ದಾರೆ. ಬ್ಯಾಟಿಂಗ್​ನಲ್ಲಿಯೂ ಉತ್ತಮ ದಾಖಲೆ ಹೊಂದಿರುವ ಇವರು ಲಿಸ್ಟ್​ ‘ಎ’ ಮತ್ತು ಪ್ರಥಮ ದರ್ಜೆ ಕ್ರಿಕೆಟ್​ ಸೇರಿ ಒಟ್ಟು 2,548 ರನ್​ ಬಾರಿಸಿದ್ದಾರೆ. 6 ಬಾರಿ 10 ಕ್ಕೂ ಅಧಿಕ ವಿಕೆಟ್ ಕಬಳಿಸಿದ್ದಾರೆ.
ಕೀನ್ಯಾ ತಂಡದ ಕೋಚ್​ ಆಗಿ ನೇಮಕಗೊಂಡ ವಿಚಾರವನ್ನು ದೊಡ್ಡ ಗಣೇಶ್ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.