ದೇಶೀಯ ಟೂರ್ನಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡಲಿದ್ದಾರೆ: ಬಿಸಿಸಿಐ
ಸೆಪ್ಟೆಂಬರ್ 5 ರಿಂದ ಆರು ತಂಡಗಳ ನಡುವಣ ದುಲೀಪ್ ಟ್ರೋಫಿ ಶುರುವಾಗಲಿದ್ದು, ಸೆಪ್ಟೆಂಬರ್ 24 ರಂದು ಕೊನೆಗೊಳ್ಳಲಿದೆ. ಅತ್ತ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯ ಶುರುವಾಗುವುದು ಸೆಪ್ಟೆಂಬರ್ 19 ರಿಂದ. ಹೀಗಾಗಿ ಭಾರತೀಯ ಆಟಗಾರರು ದುಲೀಪ್ ಟ್ರೋಫಿಯ 2ನೇ ಪಂದ್ಯದ ವೇಳೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ. ಹಾಗೆಯೇ ಈ ಟೂರ್ನಿಯಲ್ಲಿ ದೇಶದ ಆರು ವಲಯಗಳ ತಂಡಗಳು ಕಣಕ್ಕಿಳಿಯುತ್ತವೆ.
ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ. ದಕ್ಷಿಣ ವಲಯ ತಂಡದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಹೈದರಾಬಾದ್, ಕೇರಳ, ಪಾಂಡಿಚೇರಿ, ತಮಿಳುನಾಡು ರಾಜ್ಯಗಳ ಆಟಗಾರರು ಕಾಣಿಸಿಕೊಳ್ಳುತ್ತಾರೆ.
ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ಮೂಲಕ ತಯಾರಿ ನಡೆಸಲು ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚಿಸಿದೆ.