ಭಾರತದಲ್ಲಿ 2025 ರ ಪುರುಷರ ಏಷ್ಯಾಕಪ್ ಆಯೋಜನೆ
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ತೆರಳಲಿದೆಯೇ ಅಥವಾ ಇಲ್ಲವೇ ಎಂಬುದು ಭಾರಿ ಚರ್ಚೆ ಹುಟ್ಟುಹಾಕಿದೆ.  ಈ ನಿರ್ಧಾರವನ್ನು ಭಾರತ ಸರ್ಕಾರದ ಹೆಗಲಿಗೆ ಹೊರಿಸಿರುವ ಬಿಸಿಸಿಐ ಅಡ್ಡಗೋಡೆಯ ಮೇಲೆ ದೀಪ ಇಟ್ಟಿದೆ.
2023 ರ ಏಷ್ಯಾಕಪ್ ಅನ್ನು ಆಯೋಜಿಸುವ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಈ ಟೂರ್ನಿಗಾಗಿ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಭಾರತ ಸರ್ಕಾರ ನಿರಾಕರಿಸಿತ್ತು. ಇದರಿಂದಾಗಿ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲಾಯಿತು. ಅದರ ಪ್ರಕಾರ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು.
ಏಷ್ಯಾ ಕ್ರಿಕೆಟ್ ಕೌನ್ಸಿಲ್ ದಾಖಲೆಯ ಪ್ರಕಾರ, ಭಾರತವು 2025 ರಲ್ಲಿ ನಡೆಯಲ್ಲಿರುವ ಪುರುಷರ ಏಷ್ಯಾಕಪ್​ಗೆ ಆತಿಥ್ಯ ವಹಿಸಲಿದೆ. ಈ ಟೂರ್ನಿ ಟಿ20 ಸ್ವರೂಪದಲ್ಲಿ ನಡೆಯಲ್ಲಿದೆ. ಅದೇ ಸಮಯದಲ್ಲಿ, 2027 ರ ಏಷ್ಯಾಕಪ್ ಆಯೋಜಿಸುವ ಹಕ್ಕನ್ನು ಬಾಂಗ್ಲಾದೇಶಕ್ಕೆ ನೀಡಲಾಗಿದೆ. ಆದರೆ 2027ರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದ್ದು, ಈ ಎರಡೂ ಆವೃತ್ತಿಗಳಲ್ಲೂ ತಲಾ 13 ಪಂದ್ಯಗಳು ನಡೆಯಲಿವೆ. ವೇಳಾಪಟ್ಟಿ, ದಿನಾಂಕ, ಸ್ವರೂಪ ಮತ್ತು ಸ್ಥಳ ಸೇರಿದಂತೆ ಈ ಎಲ್ಲಾ ಮಾಹಿತಿಯನ್ನು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಕೂಡ ಬದಲಾಯಿಸಬಹುದು ಎಂದು ದಾಖಲೆಯಲ್ಲಿ ಹೇಳಲಾಗಿದೆ.