ಎರಡನೇ ಐಪಿಎಲ್ ಪಂದ್ಯ: ಪಂಜಾಬ್ ಕಿಂಗ್ಸ್ ಫೀಲ್ಡಿಂಗ್
ಚಂಡೀಗಢ:ಐಪಿಎಲ್​ 2024ನೇ ಆವೃತ್ತಿಯ ದಿನದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಯಾಗಿವೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಇತ್ತೀಚಿನ ವರದಿ ಪ್ರಕಾರ, ಡೆಲ್ಲಿ ಎರಡು ವಿಕೆಟ್ ಕಳೆದುಕೊಂಡು 86 ರನ್‌ ಗಳಿಸಿದೆ. ನಾಯಕ ಪಂತ್ ಶಾಯ್ ಹೋಪ್’ಗೆ ಜತೆ ನೀಡುತ್ತಿದ್ದಾರೆ. ಅಪಘಾತ ದಲ್ಲಿ ಗಾಯಗೊಂಡು ಹದಿನಾಲ್ಕು ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದ ಡೆಲ್ಲಿ ತಂಡದ ನಾಯಕ ಪಂತ್ ಇದೀಗ ಕ್ರಿಕೆಟ್‌ಗೆ ಮರಳಿದ್ದಾರೆ. ಕ್ಯಾಪಿಟಲ್ಸ್ ನಾಯಕನಾಗಿ ಆಡುತ್ತಿದ್ದಾರೆ.
ದಿನದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಪಂದ್ಯ ಈಗಾಗಲೇ ಆರಂಭವಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ:ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾಯ್ ಹೋಪ್, ರಿಷಭ್ ಪಂತ್(/), ರಿಕಿ ಭುಯಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲ್ದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ.
ಪಂಜಾಬ್ ಕಿಂಗ್ಸ್ ಆಡುವ ಬಳಗ :ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್.