ಟೆಸ್ಟ್ ಸರಣಿಯಲ್ಲಿ 600ಕ್ಕೂ ಅಧಿಕ ರನ್ ಕಲೆ ಹಾಕಿದ ಯಶಸ್ವಿ
4ನೇ ಟೆಸ್ಟ್ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ನಿರ್ಮಿಸಿದ್ದಾರೆ.
ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 117 ಎಸೆತಗಳನ್ನು ಎದುರಿಸಿ 1 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 600+ ರನ್ ಕಲೆಹಾಕಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಂಡರು.
ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದು ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್ ಮಾತ್ರ. 2002 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಾಹುಲ್ ದ್ರಾವಿಡ್ 6 ಇನಿಂಗ್ಸ್​ಗಳಲ್ಲಿ 602 ರನ್ ಬಾರಿಸಿ ದಾಖಲೆ ಬರೆದಿದ್ದರು.
ಇದಾದ ಬಳಿಕ 2017 ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಈ ದಾಖಲೆ ಮುರಿದಿದ್ದರು.
ಇದರ ಜೊತೆಗೆ ಟೆಸ್ಟ್ ಸರಣಿಯೊಂದರಲ್ಲಿ ಟೀಮ್ ಇಂಡಿಯಾ ಪರ 600+ ರನ್ ಕಲೆಹಾಕಿದ ಮೊದಲ ಎಡಗೈ ಬ್ಯಾಟರ್ ಎಂಬ ವಿಶೇಷ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ನಿರ್ಮಿಸಿದ್ದಾರೆ.