ರಾಜ್​ಕೋಟ್​ ಟೆಸ್ಟ್’ನಲ್ಲಿ ದಾಖಲೆ ಮಾಡುವರೇ ಸ್ಟೋಕ್ಸ್…?
ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಬೆನ್ ಸ್ಟೋಕ್ಸ್  ವಿಶೇಷ ದಾಖಲೆ ಬರೆಯಲಿದ್ದಾರೆ.
ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬೆನ್ ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್​ನಲ್ಲಿ ನೂರು ಪಂದ್ಯಗಳ ಸಾಧನೆ ಮಾಡಲಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 16ನೇ ಇಂಗ್ಲೆಂಡ್ ಆಟಗಾರ ಹಾಗೂ ವಿಶ್ವದ 76ನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ.
ಈ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಬೌಲಿಂಗ್ ಮಾಡಿ 3 ವಿಕೆಟ್ ಕಬಳಿಸಿದರೆ ದ್ವಿಶತಕದ ಸಾಧನೆಯನ್ನೂ ಕೂಡ ಮಾಡಲಿದ್ದಾರೆ. ಸ್ಟೋಕ್ಸ್ ಟೆಸ್ಟ್ ಕ್ರಿಕೆಟ್​ನಲ್ಲಿ ಇದುವರೆಗೆ 197 ವಿಕೆಟ್​ಗಳನ್ನು ಕಬಳಿಸಿದ್ದಾರೆ.
ಟೆಸ್ಟ್​ ಕ್ರಿಕೆಟ್​ನಲ್ಲಿ ಇದುವರೆಗೆ 99 ಪಂದ್ಯಗಳನ್ನಾಡಿರುವ ಬೆನ್ ಸ್ಟೋಕ್ಸ್ 179 ಇನಿಂಗ್ಸ್​ಗಳನ್ನು ಆಡಿದ್ದಾರೆ. ಈ ವೇಳೆ 13 ಶತಕ ಹಾಗೂ 31 ಅರ್ಧಶತಕ ಗಳೊಂದಿಗೆ 6251 ರನ್ ಕಲೆಹಾಕಿದ್ದಾರೆ. ಹಾಗೆಯೇ 197 ವಿಕೆಟ್​ಗಳನ್ನು ಕಬಳಿಸಿದ್ದಾರೆ.