ಟೆಸ್ಟ್ ಸರಣಿಯಿಂದಲೇ ವಿರಾಟ್ ಕೊಹ್ಲಿ ಔಟ್…?
ನವದೆಹಲಿ:ಪ್ರಸ್ತುತ ಭಾರತ ಕ್ರಿಕೆಟ್ ತಂಡವು ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಬ್ಯಾಟರ್ ಹಾಗೂ ಅನುಭವಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಇದೀಗ ಕೊನೆಯ ಮೂರು ಪಂದ್ಯಗಳಿಗೂ ಅಲಭ್ಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೊದಲೆರಡು ಟೆಸ್ಟ್‌ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದರು.
ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ನಂತರ, ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ.
ಪಾದದ ಗಾಯದ ಕಾರಣದಿಂದ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಆಯ್ಕೆಯಾಗದ ಮೊಹಮ್ಮದ್ ಶಮಿ, ಕೊನೆಯ ಮೂರು ಪಂದ್ಯಗಳಿಗೆ ಕೂಡ ಲಭ್ಯತೆ ಅನಿಶ್ಚಿತವಾಗಿದೆ.
“ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಹಿಂದೆ ಸರಿಯಲು ವಿರಾಟ್ ಕೊಹ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಮನವಿ ಮಾಡಿದ್ದಾರೆ,” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿತ್ತು.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆ.15ರಂದು ಆರಂಭವಾಗಲಿದೆ.