ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
ಮೈಸೂರು :ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮೈಸೂರಿನ ಮತಗಟ್ಟೆ ಯಲ್ಲಿ ಮತ ಚಲಾಯಿಸಿದರು.
ಉತ್ತಮ ಪ್ರಜಾಪ್ರಭುತ್ವಕ್ಕಾಗಿ ಜನರು ಬಂದು, ಮತ ಚಲಾಯಿಸಿ ಮತ್ತು ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕೆಂದು ನಾನು ವಿನಂತಿಸುತ್ತೇನೆ. ನಾನೂ ಮತ ಹಾಕಿದ್ದೇನೆ… ನಾವು ಪ್ರಜಾಪ್ರಭುತ್ವದಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ.
ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದೆ. ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ.