ಸಾಹಸ ಚಿತ್ರೀಕರಣಕ್ಕಾಗಿ ಹೊಸ ನಿಯಮ: ನವೆಂಬರ್ 1ರಿಂದ ಜಾರಿ
ಬೆಂಗಳೂರು :ಮಾಸ್ತಿ ಗುಡಿ ಚಿತ್ರೀಕರಣದ ವೇಳೆ ಖಳನಾಯಕರ ಸಾವು, ಇತ್ತೀಚಿನ ಲವ್ ಯು ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಓರ್ವ ಸಹಾಯಕ ಫೈಟರ್ ಸಾವಿನ ಪ್ರಕರಣದ ನಂತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎಚ್ಚೆತ್ತುಕೊಂಡಂತಿದೆ.
ನವೆಂಬರ್ 1ರಿಂದ ರಾಜ್ಯದಲ್ಲಿ ಸ್ಯಾಂಡಲ್ ವುಡ್ ಚಿತ್ರಗಳ ಸಾಹಸ ಚಿತ್ರೀಕರಣಕ್ಕಾಗಿ ಹೊಸ ನಿಯಮ ಜಾರಿ ಗೊಳಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇತ್ತೀಚಿಗೆ ಚಲನಚಿತ್ರ ಚಿತ್ರೀಕರಣ ಸಂದರ್ಭದಲ್ಲಿ ಸಂಭವಿಸಿರುವ ದುರಂತದ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಮತ್ತು ಕರ್ನಾಟಕ ಚಲನಚಿತ್ರ ಕಾರ್ಮಿಕರ, ಕಲಾವಿದರ, ತಂತ್ರಜ್ಞರ ಒಕ್ಕೂಟ, ಫೈಟರ್ ಅಸೋಸಿಯೇಷನ್ ಸೇರಿದಂತೆ ಇನ್ನಿತರ ಎಲ್ಲಾ ಕ್ರಾಫ್ಟ್ಸ್ ಗಳ ಸಮ್ಮುಖದಲ್ಲಿ ಸಭೆ ನಡೆಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರು ಕಳಿಸದಂತೆ ಕೆಳಕಂಡ ಕೆಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸ ಬೇಕೆಂದು ತೀರ್ಮಾನಿಸಲಾಯಿತು ಎಂದು ತಿಳಿಸಿದೆ.
ಸಾಹಸ ದೃಶ್ಯಗಳ ಚಿತ್ರೀಕರಣದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು