 : ʼರಾನಿʼ ಟೈಟಲ್‌ ಸಾಂಗ್‌ ರಿಲೀಸ್‌; ಸೆ. 12ರಂದು ಚಿತ್ರ ಬಿಡುಗಡೆ
ಬೆಂಗಳೂರು:ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ( ) ನಾಯಕನಾಗಿ ನಟಿಸಿರುವ ʼರಾನಿʼ ( ) ಚಿತ್ರದ ಟೈಟಲ್ ಸಾಂಗ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು. ಖ್ಯಾತ ಚಿತ್ರಲೇಖಕ ಜೆ.ಕೆ.ಭಾರವಿ ಅವರು ಪ್ರಮೋದ್ ಮರವಂತೆ ಬರೆದು, ಸಚಿನ್ ಬಸ್ರೂರ್ ಸಂಗೀತ ನೀಡಿರುವ ʼರಾನಿʼ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಗುರುತೇಜ್ ಶೆಟ್ಟಿ ನಿರ್ದೇಶನದ ಹಾಗೂ ಸ್ಟಾರ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರ ಸೆಪ್ಟೆಂಬರ್ 12ರಂದು ಬಿಡುಗಡೆಯಾಗಲಿದೆ.
ʼರಾನಿʼ ಚಿತ್ರ ಸಾಗಿ ಬಂದ ಬಗ್ಗೆ ಮಾತನಾಡಿದ ನಿರ್ದೇಶಕ ಗುರುತೇಜ್ ಶೆಟ್ಟಿ, ʼʼಇದೊಂದು ಕುಟುಂಬ ಸಮೇತ ನೋಡಬಹುದಾದ ಚಿತ್ರ. ಆ್ಯಕ್ಷನ್‌, ಸೆಂಟಿಮೆಂಟ್, ಥ್ರಿಲ್ಲರ್ ಎಲ್ಲದರ ಸಂಗಮವೇ ‘ರಾನಿ’. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳಿರುವ ‘ರಾನಿ’ ಚಿತ್ರ, ಟೀಸರ್, ಹಾಡುಗಳು ಹಾಗೂ ಟ್ರೈಲರ್‌ ಮೂಲಕ ಈಗಾಗಲೇ ಜನರ ಮನ ಗೆದ್ದಿದೆ. ಯಾವುದೇ ಕೊರತೆ ಇಲ್ಲದೆ ನಿರ್ಮಾಪಕರು ಅದ್ದೂರಿಯಾಗಿ ನಿರ್ಮಾಣ‌ ಮಾಡಿದ್ದಾರೆ. ಅಷ್ಟೇ ಅದ್ದೂರಿಯಾಗಿ ಸೆಪ್ಟೆಂಬರ್ 12ರಂದು 200 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ʼರಾನಿ” ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ʼʼಇದು ಬರೀ ಚಿತ್ರವಲ್ಲ. ನನ್ನ ಕನಸು. ನನ್ನ ಕನಸಿಗೆ ಆಸರೆಯಾದವರು ನಮ್ಮ ನಿರ್ಮಾಪಕರು.‌ ನನ್ನ ಮೇಲೆ ಭರವಸೆಯಿಟ್ಟು ಅಪಾರ ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಾಪಕರಾದ ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗಡೆ ನಿರ್ಮಿಸಿದ್ದಾರೆ. ಗುರುತೇಜ್ ಶೆಟ್ಟಿ ನಿರ್ದೇಶನ, ಪ್ರಮೋದ್ ಮರವಂತೆ ಸಾಹಿತ್ಯ, ರಾಘವೇಂದ್ರ ಬಿ. ಕೋಲಾರ ಛಾಯಾಗ್ರಹಣ ಹಾಗೂ ಮಣಿಕಾಂತ್ ಕದ್ರಿ ಅವರ ಸಂಗೀತ ಎಲ್ಲವೂ ಉತ್ತಮವಾಗಿದೆ. ಆ್ಯಕ್ಷನ್‌ ಸನ್ನಿವೇಶಗಳು ಈ ಚಿತ್ರದ ಹೈಲೆಟ್. ನಾನು ರಾನಿ ಹಾಗೂ ರಾಘವ ಎಂಬ ಎರಡು ಲುಕ್‌ಗಳಲ್ಲಿ ಕಾಣಿಸಿಕೊಂಡಿದ್ದೇನೆ‌ʼʼ ಎಂದು ನಾಯಕ ಕಿರಣ್ ರಾಜ್ ತಿಳಿಸಿದರು.
ನಿರ್ಮಾಪಕರಾದ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗಡೆ ಹಾಗೂ ಗಿರೀಶ್ ಅವರು ಚಿತ್ರವನ್ನು ನೋಡಿ ಪ್ರೋತ್ಸಾಹಿಸಿ ಎಂದರು.
ನಾಯಕಿಯರಾದ ರಾಧ್ಯ ಹಾಗೂ ಸಮೀಕ್ಷ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ಯಶ್ ಶೆಟ್ಟಿ, ಕರಿಸುಬ್ಬು, ಧರ್ಮಣ್ಣ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ರಾಘವೇಂದ್ರ ಬಿ. ಕೋಲಾರ, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಮುಂತಾದವರು ʼರಾನಿʼ ಕುರಿತು ಮಾತನಾಡಿದರು.
ಈ ಸುದ್ದಿಯನ್ನೂ ಓದಿ: : ವಿಕ್ಕಿ ವರುಣ್ – ಧನ್ಯಾ ರಾಮ್‌ಕುಮಾರ್ ಅಭಿನಯದ ʼಕಾಲಾಪತ್ಥರ್ʼ ಚಿತ್ರಕ್ಕೆ ಶಿವಣ್ಣ ಸಾಥ್‌; ಗಮನ ಸೆಳೆವ ಟ್ರೈಲರ್‌ ಇಲ್ಲಿದೆ