 : ವಿಕ್ಕಿ ವರುಣ್ – ಧನ್ಯಾ ರಾಮ್‌ಕುಮಾರ್ ಅಭಿನಯದ ʼಕಾಲಾಪತ್ಥರ್ʼ ಚಿತ್ರಕ್ಕೆ ಶಿವಣ್ಣ ಸಾಥ್‌; ಗಮನ ಸೆಳೆವ ಟ್ರೈಲರ್‌ ಇಲ್ಲಿದೆ
ಬೆಂಗಳೂರು:ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ‘ಕೆಂಡಸಂಪಿಗೆʼ, ʼಕಾಲೇಜ್ ಕುಮಾರʼ ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ʼಕಾಲಾಪತ್ಥರ್ʼ () ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ‌. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ( ) ಈ ಚಿತ್ರದ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.
ಟ್ರೈಲರ್‌ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್ʼ ಚಿತ್ರದ ಟ್ರೈಲರ್‌ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆʼʼ ಎಂದು ಹಾರೈಸಿದರು.
ʼʼನಾನು ನಟ ಆಗಬೇಕೆಂದುಕೊಂಡವನಲ್ಲ. ನಿರ್ದೇಶಕನಾಗಬೇಕೆಂದು ಚಿತ್ರರಂಗಕ್ಕೆ ಬಂದವನು. ದುನಿಯಾ ಸೂರಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡಿದ್ದೇ‌ನೆ.‌ ಈ ಸಮಯದಲ್ಲಿ ಅವರನ್ನು ನೆನಪಿಸಿಕೊಳ್ಳುತ್ತೇನೆ. ಇನ್ನು ʼಕಡ್ಡಿಪುಡಿʼ ಚಿತ್ರದ ಸಮಯದಲ್ಲಿ ಶಿವಣ್ಣ ಅವರು ಮಾತಾನಾಡಿಸಿದ್ದು ಹಾಗೂ ಅವರ ಜೊತೆ ಒಂದು ದೃಶ್ಯದಲ್ಲಿ ಅಭಿನಯಿಸಿದ್ದು ಮರೆಯಲಾಗದ ಕ್ಷಣ. ಇಂದು ಅವರೇ ನಾನು ನಿರ್ದೇಶಿಸಿರುವ ಚಿತ್ರದ ಟ್ರೈಲರ್‌ ಬಿಡುಗಡೆ ಮಾಡಿದ್ದು ಮತ್ತಷ್ಟು ಸಂತಸ ತಂದಿತ್ತಿದೆ. ಅವಕಾಶ ಕೊಟ್ಟ ನಿರ್ಮಾಪಕರಿಗೆ ಹಾಗೂ ಚಿತ್ರತಂಡದವರಿಗೆ ಧನ್ಯವಾದ. ಸೆಪ್ಟೆಂಬರ್ 13 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಥಿಯೇಟರ್‌ನಲ್ಲೇ ಸಿನಿಮಾ ನೋಡಿʼʼ ಎಂದು ನಿರ್ದೇಶಕ ಹಾಗೂ ನಟ ವಿಕ್ಕಿ ವರುಣ್ ಮನವಿ ಮಾಡಿದರು.
      (@)
ಚಿತ್ರದ ನಾಯಕಿ ಧನ್ಯಾ ರಾಮ್‌ಕುಮಾರ್‌ ಮಾತನಾಡಿ, ʼʼಶಿವಣ್ಣ ಮಾವ ಟ್ರೈಲರ್‌ ಬಿಡುಗಡೆ ಮಾಡಿಕೊಟ್ಟು ಆಶೀರ್ವಾದ ಮಾಡಿದ್ದಾರೆ. ವಿನಯ್ ರಾಜಕುಮಾರ್ ಸಹ ಬಂದಿದ್ದಾರೆ‌. ಮೊದಲಿನಿಂದಲೂ ನನ್ನ ಕುಟುಂಬ ನನಗೆ ಸಹಕಾರ ನೀಡುತ್ತಾ ಬಂದಿದೆ. ಈ ಚಿತ್ರದಲ್ಲಿ ನನ್ನ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಪಾತ್ರವಿದೆʼʼ ಎಂದು ತಿಳಿಸಿದರು.
ನಿರ್ಮಾಪಕರಾದ ಭುವನ್ ಸುರೇಶ್, ನಾಗರಾಜ್ ಬಿಲ್ಲನಕೋಟೆ ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು. ಚಿತ್ರದಲ್ಲಿ ನಟಿಸಿರುವ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ, ರಾಜೇಶ್ ನಟರಂಗ, ಚಕ್ರವರ್ತಿ ಚಂದ್ರಚೂಡ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಈ ಸುದ್ದಿಯನ್ನೂ ಓದಿ: : ‘ಗಾಂಗೇಯ’ ಚಿತ್ರದ ಹಾಡುಗಳು ರಿಲೀಸ್‌; ಭರದಿಂದ ಸಾಗಿದ ಶೂಟಿಂಗ್‌