ನವೆಂಬರ್ 24ರಂದು ’ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್
ಬೆಂಗಳೂರು:ನಟಿ ರಮ್ಯಾ ನಿರ್ಮಾಣದ, ರಾಜ್.ಬಿ.ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನವೆಂಬರ್ 24ರಂದು ಬಿಡುಗಡೆಯಾಗಲಿದೆ.
ತಾರೆ ರಮ್ಯಾ ನಿರ್ಮಾಣದ ತಮ್ಮ ‘ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌’ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’.
‘ಒಂದು ಮೊಟ್ಟೆಯ ಕಥೆ’, ‘ಟೋಬಿ’ ಖ್ಯಾತಿಯ ನಟ ರಾಜ್​.ಬಿ.ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಸಿನಿ ರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರವೊಂದರಲ್ಲಿ ಇದೂ ಒಂದು. ಸದ್ದಿಲ್ಲದೇ ಶೂಟಿಂಗ್​ ಮುಗಿಸಿರುವ ಈ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್​ ಆಗಿದೆ.
ಕೊನೆಗೂ ರಿಲೀಸ್​ ಡೇಟ್​ ಅನೌನ್ಸ್​ ಆಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಚಿತ್ರದ ಪೋಸ್ಟರ್​ ಹಂಚಿಕೊಂಡಿರುವ ರಾಜ್​.ಬಿ.ಶೆಟ್ಟಿ, “ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು! ನಮ್ಮ ಚಿತ್ರ “ಸ್ವಾತಿ ಮುತ್ತಿನ ಮಳೆ ಹನಿಯೇ” ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆ” ಎಂದು ಬರೆದುಕೊಂಡಿದ್ದಾರೆ. ಚಿತ್ರವು ಮುಂದಿನ ತಿಂಗಳ 24ರಂದು ತೆರೆ ಕಾಣಲಿದೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಒಂದು ಪ್ರಬುದ್ಧ ಲವ್‌ಸ್ಟೋರಿ. ಒಂದು ಭಾವುಕ ಪ್ರಯಾಣ. ಈ ಚಿತ್ರದಲ್ಲಿ ಪ್ರತಿಭಾನ್ವಿತ ನಟರ ದಂಡೇ ಇದ್ದು, ಮುಖ್ಯವಾಗಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮ, ಜೆಪಿ ತುಮ್ಮಿನಾಡ್, ಗೋಪಾಲಕೃಷ್ಣ ದೇಶಪಾಂಡೆ ಮತ್ತು ಇನ್ನಿತರು ಕಾಣಿಸಿಕೊಳ್ಳಲಿದ್ದಾರೆ.
ಚಿತ್ರಕ್ಕೆ ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಲಿದ್ದು, ಪ್ರವೀಣ್ ಶ್ರೀಯಾನ್ – ಛಾಯಾಗ್ರಹಣ ಹಾಗು ಸಂಕಲನದ ಜವಾಬ್ದಾರಿಯನ್ನು ನಿರ್ವಹಹಿಸಲಿದ್ದಾರೆ.