ಲೈಂಗಿಕ ದೌರ್ಜನ್ಯ: ಮಲಯಾಳಂ ಹಾಸ್ಯನಟನ ಬಂಧನ
ಕೇರಳ:ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿಯಲ್ಲಿ ಮಲಯಾಳಂ ಹಾಸ್ಯನಟರೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಲಯಾಳಂ ಹಾಸ್ಯನಟ ಬಿನು ಬಿ ಕಮಲ್ ಎಂದು ಗುರುತಿಸಲಾಗಿದೆ. ಕೆಎಸ್‌ಆರ್ ಟಿಸಿ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 21 ವರ್ಷದ ಮಹಿಳೆ ನೀಡಿದ ದೂರಿನಂತೆ ನಟನನ್ನು ವಟ್ಟಪಾರಾ ಪೊಲೀಸರು ಬಂಧಿಸಿದ್ದಾರೆ.
ನಟ ಬಿನು ಬಸ್ ನಲ್ಲಿ ಸಂತ್ರಸ್ತೆಯ ಪಕ್ಕದಲ್ಲಿ ಕುಳಿತು ಅವಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆ ಗಲಾಟೆ ಮಾಡಿದಾಗ, ವಟ್ಟಪಾರಾ ಜಂಕ್ಷನ್ ನಲ್ಲಿ ಬಸ್ ನಿಂತಿದ್ದು, ಬಿನು ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭ ಪ್ರಯಾಣಿಕರು ಮತ್ತು ಸ್ಥಳೀಯರು ಆತನನ್ನು ಬೆನ್ನಟ್ಟಿದ್ದು, ಸದ್ಯ ನಟ-ಹಾಸ್ಯನಟ ಬಿನು ಬಿ ಕಮಲ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.