ಬಾಲಿವುಡ್‌ ಹಿರಿಯ ನಟ, ನಿರ್ದೇಶಕ ಸತೀಶ್ ಕೌಶಿಕ್ ನಿಧನ
ನವದೆಹಲಿ:ಬಾಲಿವುಡ್‌ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್(66) ಮುಂಬೈನಲ್ಲಿ ನಿಧನರಾದರು.
ಸತೀಶ್ ಕೌಶಿಕ್ ನಿಧನವನ್ನು ಹಿರಿಯ ನಟ ಅನುಪಮ್ ಖೇರ್ ಟ್ವಿಟರ್‌ನಲ್ಲಿ ಖಚಿತಪಡಿಸಿದ್ದಾರೆ.
ನಟ, ಹಾಸ್ಯನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಖ್ಯಾತಿಗಳಿಸಿದ್ದ ಅವರು ಗುರುಗ್ರಾಮ್‌ ನಲ್ಲಿ ಆಪ್ತರೊಬ್ಬರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.