ಹಿರಿಯ ನಟಿ ಲೀಲಾವತಿಗೆ ಅನಾರೋಗ್ಯ
ವಿಷಯ ತಿಳಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿನೀಡಿದರು.
ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿ. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರ ಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಯ್ತು.