ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ನಿಧನ
ಬೆಂಗಳೂರು:ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ನಿಧನರಾದರು.
ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ತಂದೆ ರುದ್ರಪ್ಪ (81) ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಳಿಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿರುವುದಾಗಿ ವರದಿಯಾಗಿದೆ.