  2024: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಬಗ್ಗೆ ಆಸಕ್ತಿದಾಯಕ ಕೆಲವು ಸಂಗತಿಗಳು
ದೇಶಾದ್ಯಂತ ಸೆಪ್ಟೆಂಬರ್ 5 ರಂದು ಭಾರತದ ಮೊದಲ ಉಪರಾಷ್ಟ್ರಪತಿ (’  -) ಮತ್ತು ಎರಡನೇ ರಾಷ್ಟ್ರಪತಿ (’   ) ಡಾ. ಸರ್ವಪಲ್ಲಿ ರಾಧಾಕೃಷ್ಣನ್ (.  ) ಅವರ ಜನ್ಮದಿನವನ್ನು (  2024) ಆಚರಿಸಲಾಗುತ್ತದೆ. ಪ್ರಖ್ಯಾತ ವಿದ್ವಾಂಸರು, ಶಿಕ್ಷಕರು ಮತ್ತು ಹೆಸರಾಂತ ತತ್ತ್ವಜ್ಞಾನಿಯಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಸರ್ ಸರ್ವಪಲ್ಲಿ ರಾಧಾಕೃಷ್ಣನ್ ಎಂದೇ ಸಂಭೋದಿಸಲಾಗುತ್ತಿತ್ತು.
ಡಾ. ರಾಧಾಕೃಷ್ಣನ್ ಅವರು 1962ರಿಂದ 1967 ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದಾಗ ಅವರ ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಸೆಪ್ಟೆಂಬರ್ 5ರಂದು ಅವರ ಜನ್ಮದಿನವನ್ನು ದೇಶಾದ್ಯಂತ ಆಚರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಅದಕ್ಕೆ ಅವರು ಒಪ್ಪಲಿಲ್ಲ ಆದರೆ ಆ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಬಹುದು ಎಂದು ಸಲಹೆ ನೀಡಿದರು. ಹೀಗಾಗಿ 1962 ರಿಂದ ಪ್ರತಿ ವರ್ಷ ಸೆಪ್ಟೆಂಬರ್ 5ರಂದು , ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

