 : ಕಲ್ಯಾಣ ಕರ್ನಾಟಕದ ಸಮಗ್ರ ಪ್ರಗತಿಗೆ ಸರಕಾರ ಬದ್ಧ
ವಿಶ್ವವಾಣಿ ಸಂದರ್ಶನ:ದೇವೇಂದ್ರ ಜಾಡಿ
ಸಂಪುಟದಲ್ಲಿ ಕಲ್ಯಾಣ ಕರ್ನಾಟಕದ ವಿಷಯಗಳ ಬಗ್ಗೆ ಚರ್ಚೆ
ಹೊಸ ಕೈಗಾರಿಕಾ ನೀತಿ ಬಗ್ಗೆ ವಿಶ್ಲೇಷಣೆ, ಹೊಸ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ
ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ, ನೀರಾವರಿ, ಮೂಲ ಸೌಕರ್ಯಗಳಿಗೆ ಆದ್ಯತೆ
ಖಾಲಿ ಹುದ್ದೆಗಳ ಭರ್ತಿಗೆ ಕ್ರಮ, ಕೆಕೆಆರ್‌ಡಿಬಿಗೆ ಪ್ರತ್ಯೇಕ ಸಚಿವಾಲಯ ಬಂದರೆ ಸಹಕಾರಿ: ಡಾ.ಅಜಯ್ ಸಿಂಗ್
ಮುಖ್ಯಮಂತ್ರಿ ಸಿದ್ದರಾಮಯ್ಯ (  ) ಅವರ ನೇತೃತ್ವದ ಕಾಂಗ್ರೆಸ್ ಸರಕಾರ ( ) ಈಗಾಗಲೇ ಐದು ಗ್ಯಾರಂಟಿ( ) ಗಳನ್ನು ನೀಡುವ ಮೂಲಕ ನುಡಿದಂತೆ ನಡೆದಿದೆ. ತೀರಾ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ( ) ದಲ್ಲಿ ಆಡಳಿತಾತ್ಮಕ ಬದಲಾವಣೆ ತರುವ ಉದ್ದೇಶದಿಂದ ಈ ಬಾರಿ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿಯೇ ನಡೆಸಲಾಗುತ್ತಿದೆ. ಈ ಭಾಗದ ಸಮಗ್ರ ಪ್ರಗತಿಗೆ ಕಾಂಗ್ರೆಸ್ ಸರಕಾರ ಬದ್ಧವಾಗಿದೆ.
ಈಗಾಗಲೇ, ಈ ಭಾಗದ ಏಳು ಜಿಲ್ಲೆಗಳ 41 ಕ್ಷೇತ್ರಗಳಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ, ಉದ್ಯೋಗ, ಕೃಷಿ, ನೀರಾವರಿ ಯ ಸುಧಾರಣೆ ಜತೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಅದಕ್ಕಾಗಿ ಕೆಕೆಆರ್‌ಡಿಬಿಯ ಸಂಪೂರ್ಣ ಅನುದಾನವನ್ನು ಸಮರ್ಪಕವಾಗಿ ಬಳಸಲಾಗುತ್ತಿದ್ದು, ಐದು ಸಾವಿರ ಕೋಟಿ ರು. ಗಳ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್(  )  ‘ವಿಶ್ವವಾಣಿ’ ಯೊಂದಿಗಿನ ವಿಶೇಷ ಸಂದರ್ಶನದಲ್ಲಿ ತಿಳಿಸಿದರು.
ಇದನ್ನೂ ಓದಿ:ಫೆ.12ರಂದು ಬಾದಾಮಿಗೆ ಡಿಸಿಎಂ ಕಾರಜೋಳ, ಸಚಿವ ಶ್ರೀರಾಮುಲು ಭೇಟಿ
ಇದೆ ಸೆ.೧೭ರಂದು ಕಲ್ಯಾಣ ಕರ್ನಾಟಕದ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಂದೇ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ನಡೆಯುತ್ತಿದ್ದು, ಈ ಭಾಗದ ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಸ್ತಾಪ ಸಲ್ಲಿಸುತ್ತೇವೆ. ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಲಿದೆ ಎಂದು ಸಂದರ್ಶನದಲ್ಲಿ ಹಂಚಿಕೊಂಡರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಬಹುದಿನಗಳ ಬೇಡಿಕೆಯಾದ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಬಗ್ಗೆ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವಿರಾ?
ಇತಿಹಾಸದ ಇದೇ ಮೊದಲ ಬಾರಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಅತಿ ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಕುರಿತು ಮುಖ್ಯ ಮಂತ್ರಿಗಳ ಗಮನಕ್ಕೆ ತರುತ್ತೇವೆ. ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ನಡೆಯುತ್ತವೆ. ಸಚಿವಾಲಯ ಇಲ್ಲದಿ ರುವುದರಿಂದ ಅನೇಕ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿವೆ. ಈ ಭಾಗದ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯದ ಅವಶ್ಯವಾಗಿದೆ. ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೊಂಡರೆ ಅಭಿವೃದ್ಧಿ ಕೆಲಸಗಳಿಗೆ ವೇಗ ಸಿಗಲಿದೆ. ಈ ಕುರಿತು ಸಂಪುಟದಲ್ಲಿ ಚರ್ಚಿಸಲು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.
ಕಲ್ಯಾಣ ಕರ್ನಾಟಕ ಬೋರ್ಡ್‌ನ ಅನುದಾನ ಬಳಕೆ ಯಾವ್ಯಾವ ಕ್ಷೇತ್ರದಲ್ಲಿ ಬಳಸಲಾಗುತ್ತಿದೆ?
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ರಾಜ್ಯ ಸರಕಾರ ಅತಿ ಹಿಂದುಳಿದ ಪ್ರದೇಶದ ಜನರ ಏಳಿಗೆಗಾಗಿ ಕಟ್ಟಿಬದ್ಧ ವಾಗಿದೆ. 5000 ಕೋಟಿ ರು. ಅನುದಾನ ಬಳಸುವ ಮೂಲಕ ಶೈಕ್ಷಣಿಕ, ಆರ್ಥಿಕ, ಆರೋಗ್ಯ, ಔದ್ಯೋಗಿಕ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಮಾಡಲಾಗುತ್ತದೆ. ಆದರಿಂದ, ಕಲ್ಯಾಣ ಕರ್ನಾಟಕದ ಒಂದು ಕೋಟಿಗೂ ಅಧಿಕ ಜನರು ಸರಕಾರದ ಮೇಲೆ ನಂಬಿಕೆ ಇಟ್ಟು ಬೆಂಬಲಿಸಬೇಕು.
ಡಾ.ಅಜಯ್ ಸಿಂಗ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ
*