ಓಹಿಯೋದಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆ
ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ದುರದೃಷ್ಟಕರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ‘’ ನಲ್ಲಿ ಬರೆದಿದ್ದಾರೆ.
ಬೆನ್ನಿಗೇರಿಯ ಸಾವಿಗೆ ಕಾರಣ ತಿಳಿದಿಲ್ಲ ಆದರೆ ಒಂದು ವಾರದೊಳಗೆ ನಡೆದ ನಾಲ್ಕನೇ ಸಾವು ಇದಾಗಿದ್ದು, ಅಮೆರಿಕದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಕಳವಳಗೊಳಿಸಿದೆ.
ಪರ್ಡ್ಯೂ ವಿಶ್ವವಿದ್ಯಾನಿಲಯದಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ನೀಲ್ ಆಚಾರ್ಯ ಕಾಣೆಯಾದ ಒಂದು ದಿನದ ನಂತರ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ. ಜಾರ್ಜಿಯಾದ ಲಿಥೋನಿಯಾದ ಅಂಗಡಿಯೊಂದರಲ್ಲಿ ವಿವೇಕ್ ಸೈನಿ ಎಂಬ ಇನ್ನೊಬ್ಬ ಭಾರತೀಯ ವಿದ್ಯಾರ್ಥಿಯನ್ನು ಮಾದಕ ವ್ಯಸನಿಯೊಬ್ಬ ಸುತ್ತಿಗೆಯಿಂದ ಬರ್ಬರವಾಗಿ ಹತ್ಯೆ ಮಾಡಿದ್ದ.