ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ
ನವದೆಹಲಿ:ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್ ಹೊರಗೆ ಅರೆಸೇನಾ ಪಡೆಯ ರೇಂಜರ್‌ಗಳು ಮಂಗಳವಾರ ಬಂಧಿಸಿದ್ದಾರೆ.
ಈ ವೇಳೆ ನಡೆದ ಘರ್ಷಣೆಯಲ್ಲಿ ಇಮ್ರಾನ್ ಖಾನ್ ಅವರ ಪರ ವಕೀಲರಿಗೆ ತೀವ್ರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಆಲ್ ಖಾದಿರ್ ಟ್ರಸ್ಟ್ ಹಗರಣ ಪ್ರಕರಣದಲ್ಲಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಈ ಬಂಧನದ ಬೆನ್ನಲ್ಲೇ ಇಸ್ಲಾಮಾಬಾದ್‌ನ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ ಎಂದು ತಿಳಿದುಬಂದಿದೆ.