ಅಕ್ರಮ ಮೀನುಗಾರಿಕೆ: 15 ಭಾರತೀಯ ಮೀನುಗಾರರ ಬಂಧನ
ಕೊಲಂಬೊ:ಅಕ್ರಮ ಮೀನುಗಾರಿಕೆ ಆರೋಪದ ಮೇಲೆ ಸುಮಾರು 15 ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದ್ದು, ಎರಡು ಟ್ರಾಲರ್‌ಗಳನ್ನು ವಶಪಡಿಸಿಕೊಂಡಿದೆ.
ಮನ್ನಾರ್ ದ್ವೀಪದ ವಾಯುವ್ಯ ಕರಾವಳಿಯಲ್ಲಿರುವ ವಸಾಹತು ಪ್ರದೇಶವಾದ ತಲೈ ಮನ್ನಾರ್‌ನಲ್ಲಿ ಮೀನುಗಾರರನ್ನು ಬಂಧಿಸ ಲಾಗಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.
ಉಭಯ ಪಕ್ಷಗಳ ನಡುವೆ ಹಲವು ಉನ್ನತ ಮಟ್ಟದ ಮಾತುಕತೆಗಳು ನಡೆದಿದ್ದರೂ ಭಾರತೀಯ ಮೀನುಗಾರರು ಶ್ರೀಲಂಕಾದ ಸಮುದ್ರದಲ್ಲಿ ಅಕ್ರಮ ಮೀನುಗಾರಿಕೆ ನಡೆಸಿ ದ್ದಾರೆ ಎನ್ನಲಾಗಿದೆ.
ಪಾಕ್ ಜಲಸಂಧಿಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುವ ನೀರಿನ ಕಿರಿದಾದ ಪಟ್ಟಿಯಾಗಿದ್ದು, ಎರಡೂ ದೇಶಗಳ ಮೀನುಗಾರರಿಗೆ ಶ್ರೀಮಂತ ಮೀನುಗಾರಿಕೆ ಕೇಂದ್ರವಾಗಿದೆ.