ನಾರ್ವೆ ನೈಟ್‌ಕ್ಲಬ್‌ ಬಳಿ ಗುಂಡಿನ ದಾಳಿ: ಇಬ್ಬರ ಸಾವು, 14 ಮಂದಿಗೆ ಗಾಯ
ನಾರ್ವೆ :ಓಸ್ಲೋದಲ್ಲಿನ ನೈಟ್‌ಕ್ಲಬ್‌ ಹಾಗೂ ಹತ್ತಿರದ ಬೀದಿಗಳಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟು, 14 ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಶಂಕಿತನನ್ನು ಬಂಧಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 14 ಮಂದಿಯನ್ನು ಆಸ್ಪತ್ರೆಗೆ ದಾಖಲಿಸ ಲಾಗಿದೆ. ಹಲವರು ತೀವ್ರ ಗಾಯಗೊಂಡಿದ್ದಾರೆ. ದಾಳಿಯ ಉದ್ದೇಶದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ಲಂಡನ್ ಪಬ್‌ನ ಹೊರಗೆ ಪೊಲೀಸ್ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ಸೇರಿದಂತೆ ಅನೇಕರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಇತರೆ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.