ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ
ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.
ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿತ್ತು. ಅದರಂತೆ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವ 124 ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಘೋಷಿಸಿತ್ತು.
ಹೀಗಿದೆ ಕಾಂಗ್ರೆಸ್ ಪಕ್ಷದ 124 ಅಭ್ಯರ್ಥಿಗಳ ಮೊದಲ ಪಟ್ಟಿ
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯ ಹೆಸರು ಫೈನಲ್ ಮಾಡುವ ನಿಟ್ಟಿನಲ್ಲಿ ಸತತ ಎರಡು ದಿನಗಳ ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಭಾಗಿಯಾಗಿದ್ದರು.
ಅಂತಿಮವಾಗಿ 42 ಕ್ಷೇತ್ರಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಆ ಪಟ್ಟಿಯನ್ನು ಗುರುವಾರ ಎಐಸಿಸಿಯಿಂದ ಪ್ರಕಟಿಸಲಾಗಿದೆ.