ನಾಗಠಾಣ ವಿಧಾನಸಭಾ ಮತಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ: ಲಾಯಪ್ಪ ದೊಡಮನಿ
ಇಂಡಿ:ನಾಗಠಾಣ ವಿಧಾನಸಭಾ ಮತಕ್ಷೇತ್ರ(ಎಸ್ಸಿ) ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಟಿಕೇಟ್ ಆಕಾಂಕ್ಷಿ ಹಾಗೂ ನಾನು ಬಿಜೆಪಿಯಲ್ಲಿ ಕೆಲಸ ಮಾಡಿದ ಬಗ್ಗೆ ಸ್ವವಿವರ ಪತ್ರವನ್ನು ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ಲಾಯಪ್ಪ ದೊಡಮನಿ ಹೇಳಿದರು.
ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಂಡಿ ತಾಲೂಕು ಪಂಚಾಯಿತಿ ಅಧ್ಯಕ್ಷನಾಗಿ ರಾಜಕೀಯವಾಗಿ ಕ್ಷೇತ್ರದ ಮೂಲಕ ಸಾರ್ವಜನಿಕ ಸೇವೆಯನ್ನು ಮಾಡಿದ್ಧೇನೆ. ಬಿಜೆಪಿಯ ಹಲವು ಕಾರ್ಯಕ್ರಮಗಳನ್ನು ಸಕ್ರೀಯವಾಗಿ ತೊಡಗಿಕೊಂಡು ಪಕ್ಷ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕ ವಾಗಿ ನಿರ್ವಹಿಸಿದ್ದೇನೆ. ತಾಲೂಕು ಪಂಚಾಯಿತಿ ಸದಸ್ಯನಾಗಿ ಎರಡು ಬಾರಿ ಆಯ್ಕೆಯಾಗಿದ್ದು, ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೂ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದೇನೆ.
ಬಿಜೆಪಿ ಪಕ್ಷದಲ್ಲಿ ನಿಷ್ಠೆಯಾಗಿ ಕೆಲಸ ನಿರ್ವಹಿಸಿದ್ದರಿಂದ ನಾಗಠಾಣ ವಿಧಾನಸಭಾ ಮತಕ್ಷೇತ್ರದ ಜನರು ನನಗೆ ಬೆಂಬಲ ಸೂಚಿಸಿದ್ದರಿಂದ ಈ ಬಾರಿ ನಾಗಠಾಣ ವಿಧಾನಸಭಾ (ಮೀಸಲು ಕ್ಷೇತ್ರ) ಕ್ಷೇತ್ರಕ್ಕೆ ಟಿಕೇಟ್ ನೀಡಲು ಪಕ್ಷದ ರಾಜ್ಯ,ಜಿಲ್ಲಾ ನಾಯಕರಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ಅವರು ತಿಳಿಸಿದ್ದು, ಟಿಕೇಟ್ ಸಿಗುವ ವಿಶ್ವಾಸ ಇದೆ ಎಂದು ಹೇಳಿದರು.