ಸಾರಿಗೆ ಬಸ್- ಲಾರಿ ನಡುವೆ ಅಪಘಾತ
ಕೊಲ್ಹಾರ:ಸಮೀಪದ ಬನ್ನಿ ಹಳ್ಳದ ಹತ್ತಿರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ, ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪೂರ ಸರಕಾರಿ ಆಸ್ಪತ್ರೆಗೆ  ರವಾನಿಸಲಾಗಿದೆ. ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.