ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ
ಕೊಲ್ಹಾರ:ತಾಲ್ಲೂಕಿನ ಹಿರೇ ಗರಸಂಗಿ ಗ್ರಾಮದಲ್ಲಿ ಶನಿವಾರ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜರುಗಿತು.
ತಹಶಿಲ್ದಾರ ಪಿ ಜಿ ಪವಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕ ವ್ಯಾಪ್ತಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಗ್ರಾಮದ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿ ಅಧಿಕಾರಿಗಳು ಗ್ರಾಮಸ್ಥರ ಅಹವಾಲು ಆಲಿಸಿದರು.
ವಿವಿಧ ಇಲಾಖೆಯ ಅಡಿಯ ಒಟ್ಟು 48 ಅರ್ಜಿಗಳು ಬಂದವು ಅದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 14 ಅರ್ಜಿಗಳಲ್ಲಿ 7 ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಿ 7 ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಲಾಯಿತು, ಬೇರೆ ಇಲಾಖೆಗೆ ಸಂಬಂಧಿಸಿದ 34 ಅರ್ಜಿಗಳನ್ನು ಆಯಾ ಇಲಾಖೆಗೆ ಕಳುಹಿಸಲಾಗುವುದು ಎಂದು ತಹಶಿಲ್ದಾರ ಪಿ ಜಿ ಪವಾರ್ ಹೇಳಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್ ಎಸ್ ಪಠಾಣ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.