 : ಹವಾಮಾನ ವರದಿ; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ಬೆಂಗಳೂರು:ಅ.2ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ( ) ಅಥವಾ ಗುಡುಗು ಸಹಿತ ಮಳೆಯಾಗುವ ( ) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿ ಕರಾವಳಿ ಜಿಲ್ಲೆಗಳು, ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿ ಉತ್ತರ ಒಳನಾಡು ಹಾಗೂ ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ ಸೇರಿ ದಕ್ಷಿಣ ಒಳನಾಡಿನಲ್ಲಿ ಬುಧವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇನ್ನು ಅ.3 ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅ.4ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.7ವರೆಗೆ ಇರಲಿದೆ.
ಅ.3 ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31°  ಮತ್ತು 21°  ಆಗಿರಬಹುದು.
ಅ.9ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 2ರಿಂದ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | 2024 : ಭಾರತದಲ್ಲಿ ಈ ಮುಂಗಾರು ಮಳೆಯ ಅನಾಹುತಕ್ಕೆ ಮೃತಪಟ್ಟವರು 1400 ಮಂದಿ
ಇನ್ನು ಮುಂದಿನ ಒಂದು ವಾರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದ ಮಳೆಯಿಂದ ತುಂತುರು ಮಳೆ ಮತ್ತು ಅಕ್ಟೋಬರ್ 2 ರಿಂದ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಕ್ಟೋಬರ್ 3 ರವರೆಗೆ ಚದುರಿದಂತೆ ತುಂತುರು ಮಳೆ ನಂತರ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
