ವಿಧಾನಸಭಾ ಚುನಾವಣೆ: 126 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮ
ಮೈಸೂರು:ವಿಧಾನಸಭಾ ಚುನಾವಣೆ(2023)ಗೆ ಆಡಳಿತಾರೂಢ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಸಿದ್ಧತೆ ಆರಂಭಿಸಿದ್ದಾರೆ.
ಈ ನಡುವೆ ಜೆಡಿಎಸ್, ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನೇ ಅಂತಿಮಗೊಳಿ ಸುವ ಮೂಲಕ ಭರ್ಜರಿ ತಯಾರಿ ನಡೆಸಿದೆ.
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರ ಸ್ವಾಮಿ ನೇತೃತ್ವದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಸಭೆ ನಡೆದಿದ್ದು, ಸಭೆಯಲ್ಲಿ ವಿಧಾನಸಭಾ ಚುನಾವಣೆಗೆ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ ನಡೆದಿದೆ.
126 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಪಕ್ಷ ಸಂಘಟನೆ ಸೇರಿದಂತೆ ಸಕ್ರಿಯವಾಗಿ ಕೆಲಸ ಮಾಡಿದವರಿಗೆ ಮಾತ್ರ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಕ್ರಮದ ದಿನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.