ಹುಲ್ಲೂರು ಗ್ರಾಪಂ ಕಚೇರಿಯಲ್ಲಿ ಹೈ.ಕ. ವಿಮೋಚನಾ ದಿನಾಚರಣೆ
ಜೇವರ್ಗಿ:ತಾಲೂಕಿನ ಹುಲ್ಲೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷೆ ಕಲಾವತಿ ಅಂಬರೀಶ್ ಅವರು ಧ್ವಜಾರೋಹಣ ನೆರವೇರಿಸಿ ದರು. ಗ್ರಾಪಂ ಸದಸ್ಯರು, ಪಿಡಿಒ, ಕಚೇರಿ ಸಿಬ್ಬಂದಿ ಇದ್ದರು.
ಇದೇ ವೇಳೆ ಗ್ರಾಪಂ ಅಧ್ಯಕ್ಷೆ ಕಲಾವತಿ ಅಂಬರೀಶ್ ಅವರು, ಹುಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯ ಅರವತ್ತಕ್ಕೂ ಹೆಚ್ಚು ಮಕ್ಕಳಿಗೆ ವೈಯಕ್ತಿಕ ಖರ್ಚಿನಲ್ಲಿ ಪುಸ್ತಕ ವಿತರಿಸಿದರು.

