ಜಾವೀದ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ
ಇಂಡಿ:ವಿಜಯಪೂರ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯಲ್ಲಿ ಬರುವ ಇಂಡಿ ವಿಧಾನಸಭೆ ಕ್ಷೇತ್ರದ ಇಂಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಜಾವೀದ್ ಎಂ ಮೋಮಿನ್ ಅವರನ್ನು ತಕ್ಷಣದಿಂದ ನೇಮಕ ಆದೇಶವನ್ನು ಕರ್ನಾಟಕ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ  ಡಿ.ಕೆ ಶಿವುಕುಮಾರ ಆದೇಶ ಮಾಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲಾ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗ ದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಭೂತ ಕಾರ್ಯೋನ್ಮುಖರಾಗಬೇಕೆಂದು ತಿಳಿಸಿದ್ದಾರೆ.
***
ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಳಮಟ್ಟದಿಂದ ಕೆಲಸ ಮಾಡುತ್ತೇನೆ. ಶಾಸಕ ಯಶವಂತರಾಯಗೌಡ ಪಾಟೀಲ ನನ್ನ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸ ಎಂದಿಗೂ ಚುತಿ ಬರದಂತೆ ಕಾಂಗ್ರೆಸ್ ಪಕ್ಷ ಬೂತ ಮಟ್ಟದಿಂದ ಬೆಳೆಸಿ ಸಾಮಾನ್ಯ ಕಾರ್ಯಕರ್ತನಂತೆ ಎಲ್ಲ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಶಕ್ತಿಯುತ ಮಾಡುತ್ತೇನೆ.ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ್
