   2024: ಮೈಸೂರಿನ ಅಂಗನವಾಡಿಯಲ್ಲಿದೆ 412 ಹುದ್ದೆ; 10ನೇ ತರಗತಿ ಪಾಸಾದವರು ಅಪ್ಲೈ ಮಾಡಿ
ಮೈಸೂರು:ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (     ) ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ (  & ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (   2024).  ಒಟ್ಟು 412 ಹುದ್ದೆಗಳಿವೆ. ಆಸಕ್ತ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 19 ( ).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಅಂಗನಾಡಿ ಕಾರ್ಯಕರ್ತೆ – 83 ಹುದ್ದೆ ಮತ್ತು ಅಂಗನವಾಡಿ ಸಹಾಯಕಿ – 329 ಹುದ್ದೆಗಳಿವೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾಗಿರಬೇಕು. 10ನೇ ತರಗತಿ ತೇರ್ಗಡೆಯಾದವರು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ ಎಂದು ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಮೆರಿಟ್‌ ಲಿಸ್ಟ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
ಆನ್‌ಲೈನ್‌ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
ಹೆಚ್ಚಿನ ವಿವರಗಳಿಗೆ ವಿಬ್‌ಸೈಟ್‌:...inಗೆ ಭೇಟಿ ನೀಡಿ  ಅಥವಾ ದೂರವಾಣಿ ಸಂಖ್ಯೆ: 08222-252254ಕ್ಕೆ ಕರೆ ಮಾಡಿ.
ಈ ಸುದ್ದಿಯನ್ನೂ ಓದಿ:  2024: 10ನೇ ತರಗತಿ ಪಾಸಾಗಿದ್ದೀರಾ? ರೈಲ್ವೆಯ 14,298 ಹುದ್ದೆಗಳಿಗೆ ಅಪ್ಲೈ ಮಾಡಿ