ನಾಳೆಯಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಆರಂಭ
ಬೆಂಗಳೂರು :ರಾಜ್ಯದಲ್ಲಿ ಜೂ.27ರಿಂದ ಜುಲೈ4ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಕೋವಿಡ್ ನಡುವೆಯೂ ನಡೆಯಲಿರುವ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಜೂನ್ 27ರಿಂದ ಜುಲೈ 4ರವರೆಗೆ ನಡೆಸಲು ನಿರ್ಧರಿಸಲಾಗಿದೆ. 94649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷಾ ಪ್ರವೇಶ ಪತ್ರ ವಿತರಣೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ.
 ಪೂರಕ ಪರೀಕ್ಷೆಯ ವೇಳಾಪಟ್ಟಿ:
ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ
ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ)
ಜೂನ್ 29-ದ್ವಿತೀಯ ಭಾಷೆ(ಇಂಗ್ಲಿಷ್-ಕನ್ನಡ)
ಜೂನ್ 30-ಸಮಾಜವಿಜ್ಞಾನ
ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್ ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)
ಜುಲೈ -2ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜುಲೈ-4 ಗಣಿತ, ಸಮಾಜಶಾಸ್ತ್ರ
ಎಸ್ ಎಸ್ ಎಲ್ ಸಿ ಪೂರಕ ಕೋವಿಡ್ ನಿಯಂತ್ರಣ ಕ್ರಮಗಳು