ಎಸ್.ಎಸ್.‌ಎಲ್.‌ಸಿ. ಪರೀಕ್ಷಾ ಫಲಿತಾಂಶ: ಶೇ.85.63 ಮಕ್ಕಳು ಉತ್ತೀರ್ಣ
ಬೆಂಗಳೂರು:ಎಸ್.ಎಸ್.‌ಎಲ್.‌ಸಿ. ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟವಾಗಿದೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶೇ.85.63 ಮಕ್ಕಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
2022 ರ ಎಸ್.ಎಸ್.‌ಎಲ್.‌ಸಿ. ಪರೀಕ್ಷೆಯಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 28, 2022 ರಿಂದ ಏಪ್ರಿಲ್ 11, 2022 ರವರೆಗೆ ರಾಜ್ಯದ 3440 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು.
ಕಳೆದ 10 ವರ್ಷಗಳಲ್ಲಿಯೇ ಅಧಿಕ ಫಲಿತಾಂಶ ಈ ವರ್ಷ ಬಂದಿದೆ. 90.29 ರಷ್ಟು ವಿದ್ಯಾರ್ಥಿನಿಯರು ಪಾಸಾಗಿ ದ್ದಾರೆ. ಶೇ.81.3ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7,30,881 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ ಎಂದು ತಿಳಿಸಿದರು.
ಫಲಿತಾಂಶದ ಮರುಮೌಲ್ಯಮಾಪನ ಅಥವಾ ಅಂಕಗಳ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮೂರು ದಿನಗಳಲ್ಲೇ ತಮ್ಮ ಉತ್ತರ ಪತ್ರಿಕೆಯ ಪ್ರತಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೆಬ್ ಸೈಟ್ ನಲ್ಲಿ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.
ಈ ಮೊದಲು ಉತ್ತರ ಪತ್ರಿಕೆಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಮೌಲ್ಯಮಾಪನ ಅಥವಾ ಅಂಕಗಳ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಇಮೇಲ್ ವಿಳಾಸಕ್ಕೆ ಕಳುಹಿಸಲಾಗುತ್ತಿತ್ತು. ಆದರೆ ಇದೀಗ ಮಂಡಳಿಯ ವೆಬ್ಸೈಟ್ನಲ್ಲಿ ಉತ್ತರ ಪತ್ರಿಕೆಯ ಪ್ರತಿಯನ್ನು ಅಪ್ಲೋಡ್ ಮಾಡಲಿದ್ದು, ವಿದ್ಯಾರ್ಥಿಗಳು ನೀಡುವ ಮೊಬೈಲ್ ಸಂಖ್ಯೆಗೆ ಓಟಿಪಿ ಬಂದ ವೇಳೆ ಲಾಗಿನ್ ಕ್ರಿಯೇಟ್ ಮಾಡಬೇಕಾಗುತ್ತದೆ. ಆ ಬಳಿಕ ನೋಂದಣಿ ಸಂಖ್ಯೆ ಹಾಗೂ ಮೊಬೈಲ್ ಒಟಿಪಿಯನ್ನು ನಮೂದಿಸಿದರೆ ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ವಿದ್ಯಾರ್ಥಿಗಳು ನೋಡಬಹುದಾಗಿದೆ.