7 ಪರಿಷತ್ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ
ಬೆಂಗಳೂರು:ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ದಿನಾಂಕ 14-06-2022ರಂದು ಕೊನೆಗೊಳ್ಳಲಿದೆ. ಈ ಸ್ಥಾನಗಳಿಗೆ ಜೂ.3ರಂದು ಮತದಾನ ನಡೆಯಲಿದೆ ಎಂಬುದಾಗಿ ತಿಳಿಸಿದೆ.
ಮೇ.17ರಂದು ಚುನಾವಣಾ ಅಧಿಸೂಚನೆ ಪ್ರಕಟಣೆ ಹೊರಬೀಳಲಿದೆ. ಮೇ.24ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗ ಲಿದೆ. ಮೇ.25ರಂದು ನಾಮಪತ್ರಗಳ ಪರಿಶೀಲನೆ ಯಾಗಲಿದೆ. ಮೇ.27ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನವಾಗಲಿದೆ.
ಜೂ.3ರಂದು ಮತದಾನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಜೂ.3ರಂದು ಸಂಜೆ 5 ಗಂಟೆಗೆ ಮತ ಏಣಿಕೆ ಕಾರ್ಯ ನಡೆದು, ಫಲಿತಾಂಶ ಘೋಷಣೆಯಾಗಲಿದೆ. ಜೂ.7-06-2022ರಂದು ಚುನಾವಣಾ ಮುಕ್ತಾಯಗೊಳ್ಳಲಿದೆ.