ಜ.20ರ ವರೆಗೂ ನೈಟ್ ಕರ್ಪ್ಯೂ: ಜ.5ರಂದು ನಿರ್ಧಾರ
ಬೆಂಗಳೂರು :ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಮುಂದುವರೆಸುವ ಕುರಿತಂತೆ ಆರೋಗ್ಯ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದಾರೆ.
ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಮುಂದುವರೆಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ.
ಈ ಕುರಿತು ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ನೈಟ್ ಕರ್ಪ್ಯೂ ಮುಂದುವರೆಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.