ಕೈ ಹಿಡಿಯಲಿದ್ದಾರೆ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ?
ಹುಬ್ಬಳ್ಳಿ :ಜೆಡಿಎಸ್ ನ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಡಿ.13ರಂದು  ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.
ನವಲಗುಂದ ಕ್ಷೇತ್ರದಲ್ಲಿ ಮೂರನೇಯ ಬಾರಿಗೆ ಗೆದ್ದು ಶಾಸಕರಾಗಿ ಕಳೆದ ಬಾರಿ ಸೋಲುಂಡಿದ್ದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಕಳೆದ ವಿಧಾನಪರಿಷತ್ ಚುನಾವಣೆಯ ಸಮಯದಲ್ಲಿಯೇ ಕಾಂಗ್ರೆಸ್ ಶಾಲು ಹಾಕಿಕೊಂಡೇ ಪ್ರಚಾರ ಮಾಡಿದ್ದ ಎನ್.ಎಚ್. ಕೋನರೆಡ್ಡಿಯವರು ನಾಳೆ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕೋನರೆಡ್ಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
