ಇಂದಿನಿಂದ ನಾಲ್ಕು ದಿನ ಭಾರೀ ಮಳೆ
ಬೆಂಗಳೂರು :ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಿಡಿಲಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡ ಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನ.4 ರಂದು ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣ ಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.