ಕೆರೆಯಲ್ಲಿ ಈಜಲು ತೆರಳಿದ ನಾಲ್ವರು ನೀರು ಪಾಲು
ಹುಮನಾಬಾದ್ :ತಾಲೂಕಿನ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಖಾದ್ರಿ ದರ್ಗಾ ಹತ್ತಿರದ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ನೀರು ಪಾಲಾದ ಘಟನೆ ಸಂಭವಿಸಿದೆ.
ಹೈದ್ರಾಬಾದ್ ಬೊರಾಬಂಡಾ ನಿವಾಸಿಗಳಾದ ಸೈಯದ್ ಅಕ್ಬರ್ ಸೈಯದ್ ಉಸ್ಮಾನ್ (17), ಮಹಮದ್ ಜುಲೇದ್ ಖಾನ್( 19), ಮಹಮದ್ ಫಾದಖಾನ್ ಸಲೀಂ ಖಾನ್ (18) ಮತ್ತು ಸೈಯದ್ ಜುನೇದ್ ಸೈಯದ್ ಖಾಲೆದ್ (15) ನೀರುಪಾಲಾದವರು.
ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ರವಿಕುಮಾರ್ ನಾಯ್ಕೋಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಿಯರ ಸಹಕಾರದಿಂದ ಶವಗಳ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅವಘಡದ ಮಾಹಿತಿ ಹಬ್ಬುತ್ತಿದ್ದಂತೆ ಕೆರೆಯ ಸುತ್ತ ನೂರಾರು ಜನ ಜಮಾಯಿಸಿದ್ದಾರೆ. ಪ್ರತಿ ಗುರುವಾ ರ ಹೆಚ್ಚಿನ ಸಂಖ್ಯೆಯ ಜನರು ಇಲ್ಲಿ ದರ್ಶನಕ್ಕೆ ಆಗಮಿಸುತ್ತಾರೆ. ರಾಜ್ಯ ಸೇರಿದಂತೆ ನೆರೆ ರಾಜ್ಯಗಳ ಭಕ್ತರು ಕೂಡ ಇಲ್ಲಿಗೆ ಆಗಮಿಸುತ್ತಾರೆ. ಹುಮನಾ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
