ಹುಳಿಯಾರಿನಲ್ಲಿ ಕಾರ್ಗಿಲ್ ವಿಜಯೋತ್ಸವ
ಹುಳಿಯಾರು:ಹುಳಿಯಾರು ಕೋಡಿಪಾಳ್ಯದ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ಧ್ಯಾನನಗರಿ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹುಳಿಯಾರು-ಕೆಂಕೆರೆ ಶಾಖೆ ವತಿಯಿಂದ ಜು.26ರ ಸೋಮವಾರ ಕಾರ್ಗಿಲ್ ವಿಜಯೋತ್ಸವ ನಿಮಿತ್ತ ರಾಷ್ಟç ರಕ್ಷಕ ವೀರ ಯೋಧರಿಗೆ ಯೋಗ ನಮನಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ದಿನದ ಕಾರ್ಯಕ್ರಮದಲ್ಲಿ ಸೇನೆಯಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ ವೀರಯೋಧರಾದ ಶ್ರೀ ಸುರೇಂದ್ರಸಿ0ಗ್ ಹಾಗೂ ಶ್ರೀ ಪ್ರತಾಪ್ ಸಿಂಗ್ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಯೋಗಬಂಧುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.