 : ನಾಗಮಂಗಲ ಗಲಭೆಯ 55 ಆರೋಪಿಗಳಿಗೆ ಜಾಮೀನು
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ( ) ಗಣೇಶ ಮೂರ್ತಿಯ ವಿಸರ್ಜನೆ ( ) ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ( ) ಹಾಗೂ ಗಲಭೆ ( ) ಪ್ರಕರಣದಲ್ಲಿ ಬಂಧಿತರಾದ ಎಲ್ಲ 55 ಆರೋಪಿಗಳಿಗೆ ನ್ಯಾಯಾಲಯ ಜಾಮೀನು () ನೀಡಿದೆ.
ಈ ಪ್ರಕರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡಿತ್ತು. ಗಲಭೆಯಲ್ಲಿ ಬಂಧನವಾಗಿದ್ದ ಎಲ್ಲ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಒಟ್ಟು 55 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಈ ಎಲ್ಲರಿಗೂ ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ.
ಆರೋಪಿಗಳಿಗೆ ತಲಾ ಒಂದು ಲಕ್ಷ‌ ರೂಪಾಯಿ ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ಬಂದು ಸಹಿ ಹಾಕುವುದು, ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಹಾಗೂ ಯಾವುದೇ ಅಪರಾಧ ‌ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ಕೋರ್ಟ್‌ ಷರತ್ತು ವಿಧಿಸಿದೆ. ನಾಗಮಂಗಲದಲ್ಲಿ ಗಲಭೆಯಾದ ನಂತರ ಪೊಲೀಸರು ಸೆಪ್ಟೆಂಬರ್‌ 11ರಂದು ಆರೋಪಿಗಳನ್ನು ಬಂಧಿಸಿದ್ದರು. ಸೆಪ್ಟೆಂಬರ್‌ 12 ರಿಂದ ಆರೋಪಿಗಳು ಮಂಡ್ಯ ಜೈಲಿನಲ್ಲೇ ಇದ್ದರು. ಆರೋಪಿಗಳಿಗೆ ಸೋಮವಾರ ಬಿಡುಗಡೆ ಭಾಗ್ಯ ಸಿಗಬಹುದು.
ಗಲಭೆಯ ಹಿನ್ನೆಲೆ
ನಾಗಮಂಗಲದಲ್ಲಿ ಗಣೇಶೋತ್ಸವದ ಬಳಿಕ ನಡೆಯುತ್ತಿದ್ದ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಜಿಲ್ಲೆಯ ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ, ಗಣೇಶ ವಿಸರ್ಜನೆಯ ಅಂಗವಾಗಿ ಮೂರ್ತಿಯನ್ನು ಮೆರವಣಿಗೆಗೆ ತಂದಿದ್ದ ವೇಳೆ ಇಲ್ಲಿನ ದರ್ಗಾ ಬಳಿ ಏಕಾಏಕಿ ಕಲ್ಲು ತೂರಾಟ ನಡೆದಿತ್ತು.
ಕೆಲವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಪೆಟ್ರೋಲ್‌ ಬಾಂಬ್‌ ಎಸೆದು ಸಿಕ್ಕ ಸಿಕ್ಕಲ್ಲಿ ಬೆಂಕಿ ಕೂಡ ಹಚ್ಚಿದ್ದರು. ಕೆಲವು ವಾಹನಗಳಿಗೂ ಬೆಂಕಿ ಹಚ್ಚಿದ್ದು, ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿ ದಾಂಧಲೆ ನಡೆಸಿದ್ದರು. ದುಷ್ಕರ್ಮಿಗಳು ಕೈಯಲ್ಲಿ ಕತ್ತಿ, ತಲ್ವಾರ್‌ ಕೂಡ ಹಿಡಿದು ಬಂದಿದ್ದರು.
ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದರು. ಲಾಠಿ ಚಾರ್ಜ್‌ ಮೂಲಕ ದುಷ್ಕರ್ಮಿಗಳನ್ನು ಅಲ್ಲಿಂದ ಚದುರಿಸಿ, ಅವರು ತಂದಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದರು. ಘಟನೆಯಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿತ್ತು.
ಮುಸ್ಲಿಂ ಸಮುದಾಯದ ಕೆಲ ಯುವಕರು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿದ್ದಾರೆ. ಕೇರಳದಿಂದಲೂ ಈ ದಾಳಿ ನಡೆಸಲು ಗೂಂಡಾಗಳನ್ನು ಕರೆಸಲಾಗಿದೆ ಎಂದು ಗಣೇಶೋತ್ಸವದ ಯುವಕರು ಆರೋಪಿಸಿದ್ದರು. ಗಣಪತಿ ಮೂರ್ತಿಯನ್ನು ನೇರವಾಗಿ ನಾಗಮಂಗಲ ಪೊಲೀಸ್‌ ಠಾಣೆಯ ಎದುರು ಕರೆದೊಯ್ದು, ಧಿಕ್ಕಾರ ಕೂಗಿದ್ದರು.
ರಾಜ್ಯದ್ಯಂತ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದವು. ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಿಜೆಪಿಯು ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ಸತ್ಯಶೋಧನಾ ತಂಡವನ್ನು ರಚಿಸಿ, ಸಮಗ್ರ ವರದಿ ನೀಡಲು ನಿರ್ದೇಶಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸತ್ಯಶೋಧನಾ ತಂಡ ರಚಿಸಿದ್ದರು. ಇದರಲ್ಲಿ ಬಿಜೆಪಿ ನಾಯಕರಾದ ಸಿ.ಎನ್‌.ಅಶ್ವತ್ಥ್‌ ನಾರಾಯಣ್‌, ಬೈರತಿ ಬಸವರಾಜ್‌, ಕೆ.ಸಿ.ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್‌ ಗೌಡ, ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್ ಇದ್ದರು.
ಇದನ್ನೂ ಓದಿ: : ಗಣಪತಿಯನ್ನೇ ಜೈಲು ಕಂಬಿಯ ಹಿಂದೆ ಇಟ್ಟಿದ್ದಾರೆ- ಮಂಡ್ಯ ಗಲಭೆ ಬಗ್ಗೆ ಮೋದಿ ರಿಯಾಕ್ಟ್‌