 : ಬೆಂಗಳೂರಿನ ಈ ಮಾರ್ಗದಲ್ಲಿ ಇಂದಿನಿಂದ ಒಂದು ತಿಂಗಳವರೆಗೆ ವಾಹನ ಸಂಚಾರ ನಿರ್ಬಂಧ
ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಒದಗಿಸುವ ಕಾವೇರಿ 5 ನೇ ಹಂತದ ವಿವಿಧ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಅದರಂತೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ರಸ್ತೆಯಲ್ಲಿ ಕುಡಿಯುವ ನೀರಿನ 1900 ಎಂ.ಎಂ ಡಯಾ ಪೈಪ್ ಲೈನ್‌ ಅಳವಡಿಸುವ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ) ವರೆಗಿನ ಸಂಚರಿಸುವ ಮಾರ್ಗದಲ್ಲಿ ( ) ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು 1 ತಿಂಗಳವರೆಗೆ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ.
ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರಹಳ್ಳಿ ರಸ್ತೆಯು ದ್ವಿಮುಖ ಸಂಚಾರದ ರಸ್ತೆಯಾಗಿದ್ದು, ಸೆ. 27ರಿಂದ ಕಾಮಗಾರಿ ಮುಗಿಯುವ ವರೆಗೆ ಸುಗಮ ಸಂಚಾರದ ದೃಷ್ಟಿಯಿಂದ, ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ) ವರೆಗಿನ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು 1 ತಿಂಗಳವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ
"ಸಂಚಾರ ಸಲಹೆ/ "../0SbMrGdylv
ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಬಿಎಂಪಿ ವತಿಯಿಂದ ಎಂಇಐ (ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್) ರಸ್ತೆಯಲ್ಲಿ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ಮುಖ್ಯರಸ್ತೆಯ ವರೆಗೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಅ.1ರಿಂದ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಎಂಇಐ ರಸ್ತೆಯು ದ್ವಿಮುಖ ಸಂಚಾರದ ರಸ್ತೆಯಾಗಿದ್ದು ತುಮಕೂರು ರಸ್ತೆಯಿಂದ ಕಂಠೀರವ ಸ್ಟುಡಿಯೋ ಕಡೆಗೆ ಚಲಿಸುವ ವಾಹನಗಳು ಎಂದಿನಂತೆ ರಸ್ತೆಯ ಎಡಭಾಗದಲ್ಲಿ ಸಂಚರಿಸಬಹುದಾಗಿರುತ್ತದೆ. ಆದರೆ ಕಾಮಗಾರಿ ಹಾಗೂ ಸುಗಮ ಸಂಚಾರದ ಹಿತದೃಷ್ಟಿಯಿಂದ ಎಂಇಐ ರಸ್ತೆಯಲ್ಲಿ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಿಂದ ತುಮಕೂರು ರಸ್ತೆ ಕಡೆಗೆ (ದಕ್ಷಿಣ ದಿಕ್ಕಿನಿಂದ ಉತ್ತರ ದಿಕ್ಕಿಗೆ) ಸಂಚರಿಸುವ ಮಾರ್ಗದಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಅ.1 ರಿಂದ ಕಾಮಗಾರಿ ಮುಗಿಯುವವರೆಗೂ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ತಿಳಿಸಿದೆ.
ಪರ್ಯಾಯ ಮಾರ್ಗ
"ಸಂಚಾರ ಸಲಹೆ/ "../BayCZkH2IQ
ಈ ಸುದ್ದಿಯನ್ನೂ ಓದಿ | : ಮನೆಗೆ ಬಂದ ತಕ್ಷಣ ಪಾದಗಳನ್ನು ತೊಳೆಯುವುದರಿಂದ ಸಿಗುತ್ತವೆ ಹಲವು ಲಾಭಗಳು…