ಉಚಿತ ಬಸ್ ಪಾಸ್: ಕೆ.ಎಸ್‌.ಆರ್.ಟಿ.ಸಿ, ಬಿಎಂಟಿಸಿ ಅಧಿಕಾರಿಗಳೊಂದಿಗೆ ಚರ್ಚೆ
ಬೆಂಗಳೂರು/ಶಿರಸಿ:ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಅವರು ಬುಧವಾರ ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಕುರಿತು ಕೆ.ಎಸ್‌.ಆರ್.ಟಿ.ಸಿ‌ ಹಾಗೂ ಬಿ.ಎಮ್.ಟಿ.ಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುಧೀರ್ಘವಾಗಿ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಭೆಯಲ್ಲಿ ಬಿ‌.ಎಮ್.ಟಿ.ಸಿ ಅಧ್ಯಕ್ಷ ಎನ್.ಎಸ್.ನಂದೀಶ್ ರೆಡ್ಡಿ, ಕೆ.ಎಸ್‌.ಆರ್.ಟಿ.ಸಿ ಅಧ್ಯಕ್ಷ ಚಂದ್ರಪ್ಪಾ ಹಾಗೂ ಕೆ.ಎಸ್.ಆರ್‌.ಟಿ.ಸಿ ಮತ್ತು ಬಿ.ಎಂ.ಟಿ‌.ಸಿ ಅಧಿಕಾರಿಗಳು ಉಪಸ್ಥಿತರಿದ್ದರು.