ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ ರೌಡಿ ಸುನೀಲ್ ಕೊಲೆ
ವಿಶ್ವವಾಣಿ ಸುದ್ದಿಮನೆ ಬೆಂಗಳೂರುಕುಖ್ಯಾತ ರೌಡಿ ಸುನೀಲ್ ಅಲಿಯಾಸ್ ಸುನೀಲ್ ಕುಮಾರ್‌ನನ್ನು ನಗರದ  ಹೊರವಲಯದ ನೈಸ್ ರಸ್ತೆ ಜಂಕ್ಷನ್ ಬಳಿ  ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಆನೇಕಲ್ ರೌಡಿ ಸುನೀಲ್ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕಾರಿನಲ್ಲಿ ನೈಸ್ ರಸ್ತೆ ಜಂಕ್ಷನ್ ಬಳಿ ಶುಕ್ರವಾರ ರಾತ್ರಿ.10ರ ವೇಳೆ ಹೋಗುತ್ತಿದ್ದಾಗ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕಾರಿನ ಟೈರ್ ಪಂಕ್ಚರ್ ಮಾಡಿದ್ದಾರೆ. ಬಳಿಕ ಆತನನ್ನು ಕಾರಿನಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಅಲ್ಲದೇ,  ಬಿಡಿಸಲು ಹೋಗಿದ್ದ ಕಾರು ಚಾಲಕನ ಮೇಲೂ ಹಲ್ಲೆಗೆ ಯತ್ನಿಸಿ ಪರಾರಿಯಾಗಿರುವ ದೃಶ್ಯ ಸಮೀಪದ ಹೋಟೆಲ್  ಸಿಸಿಟಿವಿಯಲ್ಲಿ ಸೆರೆಯಾಗಿದೆ.ಸುನೀಲ್ ಆನೇಕಲ್ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದು, ಕೊಲೆ ಪ್ರಕರಣವೊಂದರ ಆರೋಪಿ ಆಗಿದ್ದ ಎಂದು ಪೊಲೀಸರು ತಿಳಿಸಿದರು. ಘಟನೆಗೆ ಸಂಬಂಧಿಸಿ ಕುಂಬಳಗೂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ನಾಪತ್ತೆಯಾಗಿದ್ದ ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.