 : ಅರುಣ್ ಯೋಗಿರಾಜ್ ಸೇರಿ ನಾಲ್ವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ
ಬೆಂಗಳೂರು:ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಅಯೋಧ್ಯೆಯ ಬಾಲರಾಮ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್, ಹಿರಿಯ ನಟ ವೈಜನಾಥ್ ಬಸಪ್ಪ ಬಿರಾದಾರ್, ಹಿರಿಯ ಲೇಖಕಿ ಸುಧಾ ಶರ್ಮಾ ಚವತ್ತಿ ಹಾಗೂ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ( ) ಪ್ರಕಟಿಸಲಾಗಿದೆ.
ಈ ಸುದ್ದಿಯನ್ನೂ ಓದಿ | : GTTCಯಲ್ಲಿದೆ ಉದ್ಯೋಗಾವಕಾಶ; ಡಿಪ್ಲೊಮಾ ಪಾಸಾದವರು ಅರ್ಜಿ ಸಲ್ಲಿಸಿ
ಅಕ್ಟೋಬರ್ 4 ರಂದು ಶುಕ್ರವಾರ ಶ್ರೀಗಂಧದಕಾವಲ್, ನಾಗರಭಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಯೋಧ್ಯೆಯ ಬಾಲರಾಮ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್, ಹಿರಿಯ ನಟ ವೈಜನಾಥ್ ಬಸಪ್ಪ ಬಿರಾದಾರ್, ಹಿರಿಯ ಲೇಖಕಿ ಸುಧಾ ಶರ್ಮಾ ಹಾಗೂ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ಎಸ್. ಧನುಷ್ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | : ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಕಾರ್ಯಕ್ರಮವನ್ನು ಮೈಸೂರಿನ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಾ. ಸಿ.ಎನ್. ಮಂಜುನಾಥ್, ಶಾಸಕ ಎಂ.ಟಿ. ಕೃಷ್ಣಪ್ಪ, ಜೆಡಿಎಸ್ ಮುಖಂಡ ಶ್ರೀ ಕೃಷ್ಣಮೂರ್ತಿ ವಿ., ಬಿಜೆಪಿ ಮುಖಂಡ ಗೋವಿಂದರಾಜು ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.