   : ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ವ್ಯವಸ್ಥೆ
ಬೆಂಗಳೂರು:ಮೈಸೂರು ದಸರಾ-2024 (  2024) ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು () ಅಕ್ಟೋಬರ್ 9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಫ್ಲೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.
ಈ ವಿಶೇಷ ಬಸ್‌ಗಳು ನಗರದ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ. ಅಲ್ಲದೆ, ಮೈಸೂರು ಮತ್ತು ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌ಡಿ ಕೋಟೆ, ಚಾಮರಾಜನಗರ, ಹುಣಸೂರು, ಕೆಆರ್ ನಗರ ಮತ್ತು ಗುಂಡ್ಲುಪೇಟೆ ಸುತ್ತಮುತ್ತಲಿನ ಪ್ರವಾಸಿ/ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಅಗತ್ಯತೆಗಳನ್ನು ಪೂರೈಸಲು ಮೈಸೂರಿನಿಂದ 400 ವಿಶೇಷ ಬಸ್‌ಗಳು ನಿಯೋಜನೆಗೊಳಿಸಿದೆ.
ಈ ಸುದ್ದಿಯನ್ನೂ ಓದಿ | : ಬೆಂಗಳೂರಿನಲ್ಲಿ ನಾಳೆ ʼಅಡ್ವೊಕೇಟ್ ಡೈರಿʼ ಕೃತಿ ಲೋಕಾರ್ಪಣೆ
ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಆರ್ ಹಿಲ್ಸ್, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಗಳಿಗೆ ಭೇಟಿ ನೀಡಲು ಮೈಸೂರಿನಿಂದ ಬರುವ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ಯಾಕೇಜ್ ಟೂರ್ ಸೌಲಭ್ಯವನ್ನು ಕೂಡ ಪ್ರಕಟಿಸಿದೆ.
ಈ ಬಸ್‌ಗೆ ‘ಗಿರಿದರ್ಶಿನಿ’ ಎಂದು ಹೆಸರಿಡಲಾಗಿದ್ದು, ಹಿರಿಯರಿಗೆ 400 ಹಾಗೂ ಮಕ್ಕಳಿಗೆ 250 ರೂ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ‘ಜಲದರ್ಶಿನಿ’ ಮಾರ್ಗದ ಬಸ್‌ಗಳು ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ, ನಿಸರ್ಗಧಾಮ, ರಾಜಾ ಸೀಟ್, ಹಾರಂಗಿ ಜಲಾಶಯ ಮತ್ತು ಕೆಆರ್‌ಎಸ್‌ನಲ್ಲಿ ಸಂಚರಿಸಲಿವೆ. ಈ ಬಸ್‌ಗಳಲ್ಲಿ ವಯಸ್ಕರಿಗೆ 450 ರೂ., ಮಕ್ಕಳಿಗೆ 300 ರೂ ನಿಗದಿ ಮಾಡಲಾಗಿದೆ.
‘ದೇವದರ್ಶಿನಿ’ ಬಸ್‌ಗಳು ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ ಮತ್ತು ಶ್ರೀರಂಗಪಟ್ಟಣವನ್ನು ಒಳಗೊಂಡಿರುತ್ತವೆ. ಈ ಬಸ್ ಗಳಲ್ಲಿ ಸಂಚರಿಸುವ ಹಿರಿಯರಿಗೆ 300 ಮತ್ತು ಮಕ್ಕಳಿಗೆ 200 ರೂ ಟಿಕೆಟ್ ದರ ನಿಗದಿ ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ | : ಪಿಎಂ ಕಿಸಾನ್ ಸಮ್ಮಾನ್; ರಾಜ್ಯದ 47.12 ಲಕ್ಷ ರೈತರಿಗೆ 942 ಕೋಟಿ ರೂ.
ಈ ಬಸ್ ಗಳಲ್ಲಿ ಸಂಚರಿಸಲು ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಒಟ್ಟಿಗೆ ಮುಂಗಡವಾಗಿ ಟಿಕೆಟ್‌ ಕಾಯ್ದಿರಿಸಿದರೆ ಶೇ 5ರಷ್ಟು ಹಾಗೂ ಹೋಗುವ, ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. .... ವೆಬ್‌ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್‌ ಕಾಯ್ದಿರಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.