 : ಇಂದು ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಮೀನುಗಾರರಿಗೆ ಎಚ್ಚರಿಕೆ
ಬೆಂಗಳೂರು:ಸೆ.25ರಂದು ಬುಧವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ( ). ಇನ್ನು ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( ) ಮುನ್ಸೂಚನೆ ನೀಡಿದೆ.
ಇನ್ನು ಸೆ. 26 ರಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಸೆ. 27 ರಂದು ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಸೆ. 28ರಂದು ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಯಾಗುವ ಸಂಭವವಿದೆ. ಇದೇ ರೀತಿಯ ಹವಾಮಾನ ಸೆ. 30ರವರೆಗೆ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಈ ಸುದ್ದಿಯನ್ನೂ ಓದಿ | : ಬೆಳಗಿನ ಉಪಾಹಾರಕ್ಕೆ ಈ 4 ಆಹಾರ ಪದಾರ್ಥಗಳನ್ನು ಎಂದಿಗೂ ಸೇವಿಸಬೇಡಿ!
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಬಹಳ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°  ಮತ್ತು 20°  ಆಗಿರಬಹುದು.